ಯಾರು ಎಷ್ಟೇ ಬೈದ್ರೂ ಏನೂ ಮಾಡೋಕ್ಕಾಗಲ್ಲ, ನೀರಿನ ರೇಟ್‌ ಹೆಚ್ಚಾಗತ್ತೆ: ಡಿಕೆಶಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: 

ಮೀಡಿಯಾದವರು, ಸಾರ್ವಜನಿಕರು ಬೈದರೂ, ವಿರೋಧ ಪಕ್ಷದವರಾದರು ವಿರೋಧ ಮಾಡಿದರೂ ನಾವು ನೀರಿನ ದರ ಹೆಚ್ಚಳ  ಮಾಡಿಯೇ ಮಾಡುತ್ತೇವೆ ಎಂದು ಡಿಸಿಎಂ ಡಿ.ಕೆ ಶಿವಕುಮಾರ್ ಖಡಕ್ ಆಗಿಯೇ ಹೇಳಿದ್ದಾರೆ.

ವಿಧಾನಸೌಧದ ಮುಂಭಾಗದಲ್ಲಿ ನಡೆಯುತ್ತಿರುವ ಕಾರ್ಯಕ್ರಮದಲ್ಲಿ 110 ಹಳ್ಳಿಗಳಿಗೆ ಕಾವೇರಿ ನೀರಿನ ಸಂಪರ್ಕ ಕಲ್ಪಿಸುವ ಅಭಿಯಾನಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು. ಈ ವೇಳೆ ನೀರು ಮತ್ತು ಪವರ್ ಈ ಎರಡು ಪ್ರಮುಖವಾಗಿದ್ದು, ಮಾಜಿ ಸಿಎಂ ಎಸ್.ಎಂ.ಕೃಷ್ಣ ಅವರ ಅವಧಿಯಲ್ಲಿ ನಾನು ನಗರಾಭಿವೃದ್ಧಿ ಸಚಿವನಾಗಿದ್ದಾಗ ನೀರು ಸರಬರಾಜು ಖಾಸಗೀಕರಣ ಚರ್ಚೆ ನಡೆದಿತ್ತು. ನಮ್ಮ ರಾಜ್ಯದಲ್ಲಿ ಇದು ಕಷ್ಟವಾಗಲಿದೆ ಎಂದು ಮಾಹಿತಿ ನೀಡಿದ್ದೆ. ಇದಕ್ಕೆ ಸಾಕಷ್ಟು ವಿರೋಧ ವ್ಯಕ್ತವಾಗಿತ್ತು. ನಂತರ ಯೋಜನೆ ಕೈ ಬಿಟ್ಟಿದ್ದೆವು. ಈಗ ನಾನು ಸಚಿವನಾದ ಮೇಲೆ ಮತ್ತೆ ಕೆಲವರು ಖಾಸಗೀಕರಣದ ಬಗ್ಗೆ ಬಂದು ಮಾತಾಡಿದ್ದರು. ನಾನು ಇದು ಆಗಲ್ಲ ಎಂದು ಹೇಳಿದ್ದೇನೆ ಎಂದಿದ್ದಾರೆ.
- Advertisement - Skool Shine Skool Shine

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!