ಯಾರು ಏನೇ ಮಾಡಿದರೂ ಡಿಕೆ ಶಿವಕುಮಾರ್ ಸರೆಂಡರ್ ಆಗಲ್ಲ: ಡಿಕೆಶಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್ :‌

ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ (DK Shivakumar) ವಿರುದ್ಧದ ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣ ಸಂಬಂಧ ತನಿಖೆ ರದ್ದು ಕೋರಿ ಸಲ್ಲಿಸಿದ್ದ ಅರ್ಜಿ ಹೈಕೋರ್ಟ್ (High Court) ವಜಾ ಗೊಳಿಸಿದ್ದು, ಈ ಬಗ್ಗೆ ಮಂಡ್ಯದಲ್ಲಿ ನಡೆದ ಕಾಂಗ್ರೆಸ್ ಸಮಾವೇಶದಲ್ಲಿ ಮಾತನಾಡಿದ ಅವರು ಅವರು, ರಾಹುಲ್ ಗಾಂಧಿ ಅವರನ್ನೇ ಬಿಡಲಿಲ್ಲ, ಇನ್ನು ನನ್ನನ್ನು ಬಿಡುತ್ತಾರಾ? ಯಾರು ಏನೇ ಮಾಡಿದರೂ ಡಿಕೆ ಶಿವಕುಮಾರ್ ಸರೆಂಡರ್ ಆಗಲ್ಲ ಎಂದು ಹೇಳಿದರು.

ಈಗಿರುವ ಬಿಜೆಪಿ ಅಭ್ಯರ್ಥಿ ಮೊದಲು ನನ್ನನ್ನು ಸಂಪರ್ಕಿಸಿದ್ದರು, ನಮ್ಮ ಅಂಗಡಿ ಕ್ಲೋಸ್ ಆಗಿದೆ, ನಿಮಗೆ ಎಲ್ಲಿಂದ ಕುರ್ಚಿ ಕೊಡಲಿ ಅಂತ ಹೇಳಿದ್ದೆ ಎಂದು ಹೇಳಿದ ಡಿಕೆ ಶಿವಕುಮಾರ್, ಜಗದೀಶ್ ಶೆಟ್ಟರ್, ಲಕ್ಷ್ಮಣ ಸವದಿ, ಲಿಂಬಿಕಾಯಿ ಎಲ್ಲಾ ಬಿಜೆಪಿ ಬಿಟ್ಟು ಬಂದಿದ್ದಾರೆ ಎಂದರು.

ಕಾಂಗ್ರೆಸ್ ಪಕ್ಷದಲ್ಲಿ ಮುಖ್ಯಮಂತ್ರಿ ಸ್ಥಾನಕ್ಕಾಗಿ ಭಾರೀ ಪೈಪೋಟಿ ಏರ್ಪಟ್ಟಿದೆ. ಸಿದ್ದರಾಮಯ್ಯ, ಡಿಕೆ ಶಿವಕುಮಾರ್, ಮಲ್ಲಿಕಾರ್ಜುನ ಖರ್ಗೆ, ಡಾ ಜಿ ಪರಮೇಶ್ವರ್ ನಡುವೆ ಸಿಎಂ ಪಟ್ಟಕ್ಕಾಗಿ ಪೈಪೋಟಿ ನಡೆಯುತ್ತಿದೆ. ಅದರಲ್ಲೂ ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್ ನಡುವೆಹೋದಲ್ಲಿ ಬಂದಲ್ಲಿ ಸಿಎಂ ಆಗುವ ಆಸೆ ಬಿಚ್ಚಿಡುತ್ತಿದ್ದಾರೆ. ಅದೇ ರೀತಿ ಮಂಡ್ಯದ ಸಮಾವೇಶದಲ್ಲೂ ಮಾತಿನ ನಡುವೆ ಡಿಕೆ ಶಿವಕುಮಾರ್, ಸಿಎಂ ಆಗುವ ಕನಸು ಬಿಚ್ಚಿಟ್ಟಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!