ಹೊಸದಿಗಂತ ಡಿಜಿಟಲ್ ಡೆಸ್ಕ್:
ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆಗಳನ್ನ ನಿಲ್ಲಿಸುವುದಿಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಗುರುವಾರ ಭರವಸೆ ನೀಡಿದರು.
78ನೇ ಸ್ವಾತಂತ್ರ್ಯ ದಿನಾಚರಣೆ ಹಿನ್ನೆಲೆಯಲ್ಲಿ ಕೆಪಿಸಿಸಿ ಕಚೇರಿಯಲ್ಲಿ ಧ್ವಜಾರೋಹಾಣ ನೆರವೇರಿಸಿ ಡಿಕೆ.ಶಿವಕುಮಾರ್ ಅವರು ಮಾತನಾಡಿದರು.
ರಾಜ್ಯದ ಜನತೆಯನ್ನು ಹಸಿವಿನಿಂದ ಮುಕ್ತ ಮಾಡಬೇಕು ಎನ್ನುವುದೇ ನಮ್ಮ ಗುರಿ. ಇಂದಿರಾಗಾಂಧಿ ಸೇರಿದಂತೆ ಕಾಂಗ್ರೆಸ್ ಕಾಲದಲ್ಲಿ ಕೊಟ್ಟ ಕಾರ್ಯಕ್ರಮಗಳು ಜನರದ ಬದುಕಿನಲ್ಲಿ ಮಹತ್ತರ ಬದಲಾವಣೆ ತಂದಿದೆ. ಕಾಂಗ್ರೆಸ್’ಗೆ ಮಾತ್ರ ಇಂತಹ ಕಾರ್ಯಕ್ರಮಗಳನ್ನು ಜಾರಿ ಮಾಡಲು ಸಾಧ್ಯ. ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆಗಳನ್ನ ನಿಲ್ಲಿಸುವುದಿಲ್ಲ ಎಂದು ಹೇಳಿದರು.
ಸ್ವಾತಂತ್ರ್ಯ ಎಂದರೆ ಬೆಲೆಕಟ್ಟಿ ಪಡೆಯುವ ವಸ್ತವಲ್ಲ. ಅದು ನಮ್ಮ ಉಸಿರು. ಇದನ್ನು ಮಹತ್ಮಾ ಗಾಂಧಿ ಹೇಳಿದ್ದಾರೆ. ಕಾಂಗ್ರೆಸ್ ಪಕ್ಷಕ್ಕೆ ದೊಡ್ಡ ಇತಿಹಾಸವಿದೆ. ಈ ದೇಶಕ್ಕೆ ಸ್ವಾತಂತ್ರ ತಂದ ಪಕ್ಷ. ಈ ಪಕ್ಷದಲ್ಲಿ ಇದ್ದೇವೆ ಅನ್ನುವುದೇ ಒಂದು ರೀತಿಯಲ್ಲಿ ನಮಗಿರುವ ಹೆಮ್ಮೆಯಾಗಿದೆ.