ಯಾರೆಷ್ಟೇ ಚೀರಾಡಲಿ, ಬಟ್ಟೆ ಹರಿದುಕೊಳ್ಳಲಿ ರಾಜೀನಾಮೆ ಕೊಡಲ್ಲ: ಪ್ರಿಯಾಂಕ್ ಖರ್ಗೆ ಸ್ಪಷ್ಟನೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಯಾರೆಷ್ಟೇ ಚೀರಾಡಲಿ, ಬೇಕಿದ್ದರೆ ಬಟ್ಟೆ ಹರಿದುಕೊಳ್ಳಲಿ ನಾನು ರಾಜೀನಾಮೆ ನೀಡುವ ಪ್ರಶ್ನೆಯೇ ಇಲ್ಲ ಎಂದು ಸಚಿವ ಪ್ರಿಯಾಂಕ್ ಖರ್ಗೆ ಸ್ಪಷ್ಟಪಡಿಸಿದ್ದಾರೆ.

ಬೀದರ್​ನಲ್ಲಿ ಗುತ್ತಿಗೆದಾರ ಸಚಿನ್ ಆತ್ಮಹತ್ಯೆಗೆ ಸಂಬಂಧಿಸಿದಂತೆ ಬಿಜೆಪಿಯು ಸಚಿವ ಪ್ರಿಯಾಂಕ್ ಖರ್ಗೆ ರಾಜೀನಾಮೆಗೆ ಪಟ್ಟು ಹಿಡಿದಿದೆ. ಈ ಕುರಿತು ಮಾತನಾಡಿರುವ ಅವರು, ಯಾರೆಷ್ಟೇ ಚೀರಾಡಿದರೂ, ಬಟ್ಟೆ ಹರಿದುಕೊಂಡರೂ, ರಾಜೀನಾಮೆ ಕೊಡುವ ಪ್ರಶ್ನೆಯೇ ಇಲ್ಲ, ಯಾವುದಾದರೂ ದಾಖಲೆ ಇದ್ದರೆ ತೋರಿಸಲಿ ಎಂದಿದ್ದಾರೆ.

ವಿಜಯೇಂದ್ರ ವಿರುದ್ಧ ಅಕ್ರಮ ಹಣ ವರ್ಗಾವಣೆ ಪ್ರಕರಣ ದಾಖಲಾಗಿದೆ. ವಿಜಯೇಂದ್ರ ಏಕೆ ರಾಜೀನಾಮೆ ನೀಡಲಿಲ್ಲ ಎಂದು ಪ್ರಶ್ನಿಸಿದ್ದಾರೆ.

- Advertisement - Prestige

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!