ಬಿಸಿಯೂಟ ನೀಡದೆ ಮಸಾಜ್‌ ಮಾಡಲು ಹೇಳಿದ ಶಿಕ್ಷಕರು; ಸಿಟ್ಟಿಗೆದ್ದ ವಿದ್ಯಾರ್ಥಿಗಳಿಂದ ಶಾಲೆ ಧ್ವಂಸ!

ಹೊಸದಿಗಂತ ಡಿಜಿಟಲ್‌ ಡೆಸ್ಕ್‌
ಮಧ್ಯಾಹ್ನದ ಊಟದ ವ್ಯವಸ್ಥೆ ಸಮರ್ಪಕವಾಗಿಲ್ಲ ಎಂದು ಆರೋಪಿಸಿ ವಿದ್ಯಾರ್ಥಿಗಳು ಗಲಾಟೆ ನಡೆಸಿ ಶಾಲೆಯ ಆಸ್ತಿಯನ್ನು ಧ್ವಂಸಗೊಳಿಸಿರುವ ಘಟನೆ ಬಿಹಾರದ ಕತಿಹಾರ್ ಜಿಲ್ಲೆಯಲ್ಲಿ ನಡೆದಿದೆ.
ಕತಿಹಾರ್‌ನ ಬರ್ಸೋಯ್ ಬ್ಲಾಕ್‌ನ ಬರಿಯುಲ್ ನಗರದ ಪ್ರಾಥಮಿಕ ಶಾಲೆಯಲ್ಲಿ ಈ ಘಟನೆ ವರದಿಯಾಗಿದೆ.
ಗಲಾಟೆಯಲ್ಲಿ ತೊಡಗಿದ್ದ ವಿದ್ಯಾರ್ಥಿಗಳು ಶಾಲೆಯಲ್ಲಿ ಮಧ್ಯಾಹ್ನದ ಊಟವನ್ನು ನೀಡುತ್ತಿಲ್ಲ ಎಂದು ಆರೋಪಿಸಿದ್ದಾರೆ.
ಶಿಕ್ಷಕರು ಪಾಠ ಮಾಡುವ ಬದಲು ಮಸಾಜ್ ಮಾಡುವಂತೆ ಒತ್ತಾಯಿಸುತ್ತಿದ್ದಾರೆ ಎಂದು ವಿದ್ಯಾರ್ಥಿಗಳು ಆಕ್ರೋಶ ಹೊರಹಾಕಿದ್ದಾರೆ.

ಘಟನೆಯ ವೀಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ವಿದ್ಯಾರ್ಥಿಗಳು ಶಾಲೆಯನ್ನು ಧ್ವಂಸಗೊಳಿಸುತ್ತಿರುವುದನ್ನು ಕಾಣಬಹುದು.  ಶಾಲೆಯ ಆವರಣದಲ್ಲಿ ಗಲಾಟೆ ಸೃಷ್ಟಿಸಲು ಕೆಲ ಗ್ರಾಮಸ್ಥರು ವಿದ್ಯಾರ್ಥಿಗಳನ್ನು ಪ್ರಚೋದಿಸಿದ್ದಾರೆ ಎಂದು ಸ್ಥಳೀಯ ಮಾಧ್ಯಮಗಳು ವರದಿ ಮಾಡಿವೆ. ಜಿಲ್ಲಾಡಳಿತವು ಈ ಪ್ರಕರಣವನ್ನು ಗಂಬೀರವಾಗಿ ಪರಿಗಣಿಸಿದ್ದು ತನಿಖೆಗೆ ಆದೇಶಿಸಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!