ಹೊಸದಿಗಂತ ಡಿಜಿಟಲ್ ಡೆಸ್ಕ್:
ಇಂದು ಪ್ರಧಾನಿ ಮೋದಿ ಅವರು ದೆಹಲಿಯಲ್ಲಿ ‘ನೋ ಮನಿ ಫಾರ್ ಟೆರರ್’ ಕುರಿತ ಮೂರನೇ ಜಾಗತಿಕ ಸಮ್ಮೇಳನವನ್ನು ಉದ್ಘಾಟಿಸಲಿದ್ದಾರೆ.
75 ದೇಶಗಳ ಜೊತೆ ಭಯೋತ್ಪಾದಕ ಹಣಕಾಸಿಗೆ ಸಂಬಂಧಿಸಿದ ವಿಷಯ ಚರ್ಚೆಯಾಗಲಿದೆ. ಈ ಹಿಂದೆ 2018 ಮತ್ತು 2019ರಲ್ಲಿ ಫ್ರಾನ್ಸ್ ಮತ್ತು ಆಸ್ಟ್ರೇಲಿಯಾದಲ್ಲಿ ಸಮ್ಮೇಳನ ನಡೆದಿತ್ತು.
ಇಂದು ಹಾಗೂ ನಾಳೆ ದೆಹಲಿಯ ತಾಜ್ ಪ್ಯಾಲೇಸ್ ಹೋಟೆಲ್‌ನಲ್ಲಿ ಸಮ್ಮೇಳನ ನಡೆಯಲಿದೆ. ಭಯೋತ್ಪಾದನೆ ನಿಗ್ರಹದ ಮೇಲೆ ಪ್ರಸ್ತುತ ಅಂತಾರಾಷ್ಟ್ರೀಯ ಆಡಳಿತದ ಪರಿಣಾಮಕಾರಿತ್ವ ಮತ್ತು ಭವಿಷ್ಯದ ಸವಾಲುಗಳನ್ನು ಎದುರಿಸಲು ಅಗತ್ಯವಾದ ಕ್ರಮಗಳ ಬಗ್ಗೆ ಚರ್ಚಿಸುವ ವೇದಿಕೆ ಇದಾಗಿರಲಿದೆ ಎಂದು ಪ್ರಧಾನ ಮಂತ್ರಿ ಕಚೇರಿ ಹೇಳಿಕೆಯಲ್ಲಿ ತಿಳಿಸಿದೆ.
ಸಚಿವರು, ಬಹುಪಕ್ಷೀಯ ಸಂಸ್ಥೆಗಳ ಮುಖ್ಯಸ್ಥರು ಮತ್ತು ಫೈನಾನ್ಷಿಯಲ್ ಆಕ್ಷನ್ ಟಾಸ್ಕ್ ಫೋರ್ಸ್ (ಎಫ್‌ಎಟಿಎಫ್) ನಿಯೋಗಗಳ ಮುಖ್ಯಸ್ಥರು ಸೇರಿದಂತೆ ಪ್ರಪಂಚದಾದ್ಯಂತ ಸುಮಾರು 450 ಪ್ರತಿನಿಧಿಗಳು ಇದರಲ್ಲಿ ಭಾಗವಹಿಸಲಿದ್ದಾರೆ.