ಹೊಸದಿಗಂತ ಡಿಜಿಟಲ್ ಡೆಸ್ಕ್ :
ತಮಿಳುನಾಡಿನಲ್ಲಿ ಇನ್ನು ಮುಂದೆ ಖಾಸಗಿ ವ್ಯಕ್ತಿಗಳು ಅಥವಾ ಧಾರ್ಮಿಕ ಸಂಸ್ಥೆಗಳು ಆನೆಗಳನ್ನು ಸ್ವಾಧೀನಪಡಿಸಿಕೊಳ್ಳದಂತೆ ನೋಡಿಕೊಳ್ಳಬೇಕು ಎಂದು ಮದ್ರಾಸ್ ಹೈಕೋರ್ಟ್‌ನ ಮಧುರೈ ಪೀಠವು ಸರ್ಕಾರದ ಕಾರ್ಯದರ್ಶಿ, ಪರಿಸರ ಮತ್ತು ಅರಣ್ಯ ಇಲಾಖೆಗೆ ಸೂಚನೆ ನೀಡಿದೆ.
ಎಲ್ಲ ಧಾರ್ಮಿಕ ಶ್ರದ್ಧಾಕೇಂದ್ರಗಳು ಮತ್ತು ಇತರ ಖಾಸಗಿ ಒಡೆತನದ ಆನೆಗಳ ತಪಾಸಣೆ ನಡೆಸಬೇಕು ಎಂದು ಸರ್ಕಾರದ ಕಾರ್ಯದರ್ಶಿ, ಪರಿಸರ ಮತ್ತು ಅರಣ್ಯ ಇಲಾಖೆಗೆ ನಿರ್ದೇಶನ ನೀಡಿದೆ.
ಈಗ ಸಾಕಾನೆಗಳಾಗಿರುವ ಎಲ್ಲ ಆನೆಗಳನ್ನು (ದೇವಾಲಯಗಳು ಮತ್ತು ಖಾಸಗಿ ಒಡೆತನದಲ್ಲಿ) ಸರ್ಕಾರಿ ಪುನರ್ವಸತಿ ಶಿಬಿರಗಳಿಗೆ ಸ್ಥಳಾಂತರಿಸಬೇಕು. ಈ ಕುರಿತು ನಿರ್ಧಾರ ತೆಗೆದುಕೊಳ್ಳುವ ಸಮಯ ಇದೀಗ ಬಂದಿದೆ. ಸರ್ಕಾರದ ಕಾರ್ಯದರ್ಶಿ, ಪರಿಸರ ಮತ್ತು ಅರಣ್ಯ ಇಲಾಖೆ ಸರ್ಕಾರದ ಕಾರ್ಯದರ್ಶಿ, ಹಿಂದೂ ಧಾರ್ಮಿಕ ಮತ್ತು ದತ್ತಿ ಇಲಾಖೆಯ ಸಮನ್ವಯದೊಂದಿಗೆ ಈ ಕೆಲಸ ಆಗಬೇಕು ಎಂದು ಕೋರ್ಟ್ ನಿರ್ದೇಶನದಲ್ಲಿ ಸೂಚಿಸಲಾಗಿದೆ.