ಇನ್ಮುಂದೆ ಕಂಡಕ್ಟರ್‌ ಜತೆ ಚಿಲ್ಲರೆಗೋಸ್ಕರ ಕಿತ್ತಾಡಬೇಕಿಲ್ಲ! ಎಲ್ಲ ಬಸ್​ಗಳಿಗೂ QR ಕೋಡ್‌ ವಿಸ್ತರಣೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: 

ಕ್ಯುಆರ್ ಕೋಡ್ ಟಿಕೆಟ್ ವ್ಯವಸ್ಥೆ ಬಹುತೇಕ ಎಲ್ಲ ಕೆಎಸ್​ಆರ್​​ಟಿಸಿ ಬಸ್​ಗಳಿಗೂ ಇದೀಗ ವಿಸ್ತರಣೆಯಾಗಿದ್ದು, ಯುಪಿಐ ಆ್ಯಪ್ ಮೂಲಕವೇ ಟಿಕೆಟ್ ಹಣ ಪಾವತಿ ಮಾಡಬಹುದಾಗಿದೆ. ಸುಮಾರು 9,000 ಬಸ್‌ಗಳಲ್ಲಿ ಕ್ಯುಆರ್ ಕೋಡ್ ಟಿಕೆಟ್ ವ್ಯವಸ್ಥೆ ಜಾರಿಗೊಳಿಸಲಾಗಿದೆ ಎಂದು ಕೆಎಸ್​ಆರ್​​ಟಿಸಿ ಮೂಲಗಳು ತಿಳಿಸಿವೆ.

ಕ್ಯುಆರ್ ಕೋಡ್ ಟಿಕೆಟ್ ವ್ಯವಸ್ಥೆಯನ್ನು ನವೆಂಬರ್ 6 ರಂದು ಕೆಎಸ್​ಆರ್​​ಟಿಸಿ ಬಸ್​​ಗಳಲ್ಲಿ ಆರಂಭಿಸಲಾಗಿತ್ತು. ಸದ್ಯ ನಿಗಮದ ಎಲ್ಲಾ 8,941 ಬಸ್‌ಗಳಿಗೆ ವಿಸ್ತರಿಸಲಾಗಿದೆ.

ಕ್ಯುಆರ್ ಕೋಡ್ ಟಿಕೆಟ್ ವ್ಯವಸ್ಥೆ ಆರಂಭದಲ್ಲೇ ಗಣನೀಯ ಯಶಸ್ಸನ್ನು ಸಾಧಿಸಿದೆ. ಸಂಸ್ಥೆಯ ದೈನಂದಿನ ಆದಾಯದ 7 ಕೋಟಿ ರೂ. (ಶಕ್ತಿ ಯೋಜನೆ ಮತ್ತು ವಿದ್ಯಾರ್ಥಿ ಪಾಸ್ ಫಲಾನುಭವಿಗಳನ್ನು ಹೊರತುಪಡಿಸಿ) ಪೈಕಿ 30-40 ಲಕ್ಷ ರೂಪಾಯಿ ಕ್ಯುಆರ್ ಕೋಡ್ ಟಿಕೆಟ್ ವ್ಯವಸ್ಥೆ ಮೂಲಕವೇ ಪಾವತಿಯಾಗಿದೆ ಎಂದು ಮೂಲಗಳು ತಿಳಿಸಿವೆ. ಇದಲ್ಲದೆ, ಎನಿವೇರ್ ಎನಿಟೈಮ್ ಅಡ್ವಾನ್ಸ್ಡ್ ರಿಸರ್ವೇಶನ್ ಸಿಸ್ಟಮ್ (ಅವತಾರ್) ಮೂಲಕ 28,000 ಬುಕಿಂಗ್‌ಗಳಿಂದ ಕೆಎಸ್‌ಆರ್‌ಟಿಸಿ ಇನ್ನೂ 1.5 ಕೋಟಿ ರೂಪಾಯಿ ಆದಾಯ ಸಂಗ್ರಹಿಸಿದೆ.

- Advertisement - Prestige

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!