ಹೊಸದಿಗಂತ ಡಿಜಿಟಲ್ ಡೆಸ್ಕ್:
ಅಮೆರಿಕದ ಪ್ರತಿಷ್ಠಿತ ಹಾರ್ವರ್ಡ್ ವಿಶ್ವವಿದ್ಯಾಲಯದಲ್ಲಿ ವಿದೇಶಿ ವಿದ್ಯಾರ್ಥಿಗಳ ಪ್ರವೇಶವನ್ನು ನಿಷೇಧಿಸಿ ಟ್ರಂಪ್ ಸರ್ಕಾರ ಆದೇಶ ಹೊರಡಿಸಿದೆ.
ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಗೃಹ ಭದ್ರತಾ ಕಾರ್ಯದರ್ಶಿ ಕ್ರಿಸ್ಟಿ ನೋಯೆಮ್ ಅವರು ಈ ಬಗ್ಗೆ ಅಧಿಕೃತ ಮಾಹಿತಿ ಶೇರ್ ಮಾಡಿದ್ದಾರೆ.
2025ರ ಕ್ಯೂಎಸ್ ವಿಶ್ವವಿದ್ಯಾಲಯಗಳ ಶ್ರೇಯಾಂಕದಲ್ಲಿ ನಾಲ್ಕನೇ ಸ್ಥಾನದಲ್ಲಿದೆ. ಆದರೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮತ್ತು ಹಾರ್ವರ್ಡ್ ವಿಶ್ವವಿದ್ಯಾಲಯದ ನಡುವೆ ನಡೆಯುತ್ತಿರುವ ಉದ್ವಿಗ್ನತೆಯಿಂದಾಗಿ, ವಿದೇಶಿ ವಿದ್ಯಾರ್ಥಿಗಳು ಇನ್ನು ಮುಂದೆ ಇಲ್ಲಿ ಪ್ರವೇಶ ಪಡೆಯಲು ಸಾಧ್ಯವಾಗುವುದಿಲ್ಲ. ಇನ್ನು ಈಗಾಗಲೇ ಹಾರ್ವರ್ಡ್ ವಿಶ್ವವಿದ್ಯಾಲಯಕ್ಕೆ ದಾಖಲು ಆಗಿರುವ ವಿದ್ಯಾರ್ಥಿಗಳನ್ನು ಬೇರೆ ಕಾಲೇಜುಗಳಿಗೆ ವರ್ಗಾವಣೆ ಮಾಡಲಾಗುತ್ತದೆ ಎಂದು ತಿಳಿಸಲಾಗಿದೆ.