ಹೊಸದಿಗಂತ ಡಿಜಿಟಲ್ ಡೆಸ್ಕ್:
ನಾನು ಇನ್ಮುಂದೆ ಸಿನಿಮಾ ಮಾಡೋದನ್ನು ಬಂದ್ ಮಾಡಿದ್ದೇನೆ, 24*7 ಫುಲ್ ಟೈಮ್ ರಾಜಕಾರಣಿ ಆಗಿ ಕೆಲಸ ಮಾಡ್ತೀನಿ ಎಂದು ನಟ, ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಹೇಳಿದ್ದಾರೆ.
ಮಂಡ್ಯದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ನಿಖಿಲ್, ನಾನು ಇನ್ಮುಂದೆ ಸಿನಿಮಾ ಮಾಡೋದನ್ನು ಬಂದ್ ಮಾಡಿದ್ದೇನೆ. ಪಕ್ಷ ಕಟ್ಟುವ ಜವಾಬ್ದಾರಿ ನನ್ನ ಮೇಲೆ ಇದೆ. ಹೀಗಾಗಿ ನಾನು ರಾಜ್ಯಾದ್ಯಂತ ಸಂಚಾರ ಮಾಡಿ ಪಕ್ಷ ಸಂಘಟನೆ ಮಾಡ್ತೀನಿ. 24*7 ರಾಜಕಾರಣಿ ಆಗಿ ಕೆಲಸ ಮಾಡ್ತೀನಿ ಎಂದು ನಿಖಿಲ್ ಹೇಳಿದ್ದಾರೆ.
ಜಾಗ್ವಾರ್ ಸಿನಿಮಾ ಮೂಲಕ ಕನ್ನಡ ಚಿತ್ರರಂಗಕ್ಕೆ ಎಂಟ್ರಿ ಕೊಟ್ಟ ನಿಖಿಲ್, ನಾಯಕ ನಟನಾಗಿ ಪಾದಾರ್ಪಣೆ ಮಾಡಿದ್ದು, ಬಳಿಕ ಸೀತಾರಾಮ ಕಲ್ಯಾಣ, ರೈಡರ್ ಸಿನಿಮಾದಲ್ಲಿ ನಾಯಕ ನಟನಾಗಿ ನಟಿಸಿದ್ದಾರೆ. ಇನ್ನೂ ದರ್ಶನ್ ನಾಯಕ ನಟನೆಯ ಕುರುಕ್ಷೇತ್ರ ಸಿನಿಮಾದಲ್ಲಿ ʻಅಭಿಮನ್ಯುʼ ಪಾತ್ರದಲ್ಲಿ ಕಾಣಿಸಿಕೊಂಡು ನಿಖಿಲ್ ಸೈ ಎನ್ನಿಸಿಕೊಂಡಿದ್ದರು. ಸದ್ಯ ನಿಖಿಲ್ ಅವರ ಕೈಯಲ್ಲಿ ಯದುವೀರ ಎಂಬ ಸಿನಿಮಾ ಸಹ ಇತ್ತು. ಇದೀಗ ಸದ್ಯ ನಿಖಿಲ್ ಸಿನಿಮಾ ಕ್ಷೇತ್ರದಿಂದ ದೂರ ಉಳಿಯುವ ನಿರ್ಧಾರ ಮಾಡಿದ್ದಾರೆ.