ಹೊಸದಿಗಂತ ಡಿಜಿಟಲ್ ಡೆಸ್ಕ್:
ಪ್ರಯಾಗ್ ರಾಜ್ ನಲ್ಲಿ ನಡೆಯುತ್ತಿರುವ ಮಹಾಕುಂಭ ಮೇಳದಲ್ಲಿ ಕಾಲ್ತುಳಿತ ಸಂಭವಿಸಿ ಬೆಳಗಾವಿಯ ನಾಲ್ವರು ಸಾವನ್ನಪ್ಪಿದ್ದಾರೆ. ಮೃತದೇಹಗಳನ್ನು ಏರ್ ಲಿಫ್ಟ್ ಮಾಡಲಾಗುತ್ತಿದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದುರಂತದಲ್ಲಿ ಕೆಲವರು ನಾಪತ್ತೆಯಾಗಿದ್ದಾರೆ ಎಂಬ ಬಗ್ಗೆ ನಮಗೆ ಮಾಹಿತಿ ಸಿಕ್ಕಿಲ್ಲ. ಮೃತದೇಹವನ್ನು ಎರ್ ಲಿಫ್ಟ್ ಮೂಲಕ ತರಲಾಗುತ್ತಿದೆ. ಈ ಬಗ್ಗೆ ಜಿಲ್ಲಾಧಿಕಾರಿಗಳಿಗೆ, ಜಿಲ್ಲಾ ಉಸ್ತುವಾರಿ ಸಚಿವರಿಗೆ ಜವಾಬ್ದಾರಿ ವಹಿಸಲಾಗಿದೆ ಎಂದರು.
ದುರಂತದಲ್ಲಿ ಮೃತಪಟ್ಟ ನಾಲ್ವರ ಕುಟುಂಬಕ್ಕೆ ಸೂಕ್ತ ಪರಿಹಾರ ನೀಡಲಗುವುದು ಎಂದು ಭರವಸೆ ನೀಡಿದ್ದಾರೆ.