Friday, March 31, 2023

Latest Posts

ಇನ್ಮುಂದೆ ವಿಮಾನದ ಬ್ಯುಸಿನೆಸ್‌ ಕ್ಲಾಸ್‌ನಲ್ಲಿ ಪ್ರಯಾಣ ಮಾಡುವಂತಿಲ್ಲ: ಪಾಕ್ ಸಚಿವರಿಗೆ ಖಡಕ್ ಸೂಚನೆ!

ಹೊಸದಿಗಂತ ಡಿಜಿಟಲ್ ಡೆಸ್ಕ್:

ಪಾಕಿಸ್ತಾನ ಸರ್ಕಾರ ತಮ್ಮ ಸಚಿವರಿಗೆ ಬಿಗ್ ಶಾಕ್ ನೀಡಿದ್ದು, ಇನ್ಮುಂದೆ ವಿಮಾನದ ಬ್ಯುಸಿನೆಸ್‌ ಕ್ಲಾಸ್‌ನಲ್ಲಿ ಪ್ರಯಾಣ ಮಾಡುವಂತಿಲ್ಲ. ಅಷ್ಟೇ ಅಲ್ಲದೇ ಪಂಚತಾರಾ ಹೋಟೆಲ್‌ಗಳಲ್ಲಿ ಉಳಿಯುವಂತಿಲ್ಲ ಎಂದು ಸೂಚನೆ ನೀಡಿದೆ.

ಹಣದುಬ್ಬರ, ಸಾಲದ ಹೊರೆ ತಪ್ಪಿಸಲು ವೆಚ್ಚ ಕಡಿತದ ಕ್ರಮಗಳನ್ನು ಸರ್ಕಾರ ಅನಾವರಣಗೊಳಿಸಿದೆ. ಜುಲೈನಲ್ಲಿ ಮುಂದಿನ ಬಜೆಟ್‌ನಲ್ಲಿ ಸರ್ಕಾರವು ಮತ್ತಷ್ಟು ಕಠಿಣ ಕ್ರಮಗಳನ್ನು ಅನುಸರಿಸಲಿದೆ ಎಂದು ಪ್ರಧಾನಿ ಶೆಹಬಾಜ್ ಷರೀಫ್ (Shehbaz Sharif) ಹೇಳಿದ್ದಾರೆ.

ಇಸ್ಲಾಮಾಬಾದ್‌ನಲ್ಲಿ ನಡೆದ ಕ್ಯಾಬಿನೆಟ್ ಸಭೆಯ ನಂತರ ಮಾತನಾಡಿದ ಅವರು, ಇದು ಈ ಸಮಯದ ಅಗತ್ಯವಾಗಿದೆ. ಸಮಯವು ನಮ್ಮಿಂದ ಸಂಯಮ, ಸರಳತೆ ಮತ್ತು ತ್ಯಾಗವನ್ನು ಬಯಸಿದೆ ಎಂದು ತಿಳಿಸಿದ್ದಾರೆ.

ದೇಶದ ದುರ್ಬಲ ಪರಿಸ್ಥಿತಿ ವಿರುದ್ಧ ಜನಸಾಮಾನ್ಯರು ಬೀದಿಗಿಳಿದು ಪ್ರತಿಭಟಿಸುತ್ತಿದ್ದಾರೆ. ಬಿಕಟ್ಟಿನ ಸನ್ನಿವೇಶ ನಿಭಾಯಿಸಲು ಸರ್ಕಾರವು ಕಠಿಣ ಕ್ರಮಗಳನ್ನು ಕೈಗೊಳ್ಳಲು ಮುಂದಾಗಿದೆ. ಉನ್ನತ ಶ್ರೇಣಿಯ ಸರ್ಕಾರಿ ಅಧಿಕಾರಿಗಳಲ್ಲದೆ ಹಲವಾರು ಫೆಡರಲ್ ಮತ್ತು ರಾಜ್ಯ ಸಚಿವರು ತಮ್ಮ ಸಂಬಳ ಮತ್ತು ಸವಲತ್ತುಗಳನ್ನು ತ್ಯಜಿಸಲು ಸ್ವಯಂಪ್ರೇರಿತರಾಗಿ ಮುಂದೆ ಬಂದಿದ್ದಾರೆ ಎಂದು ಷರೀಫ್ ಹೇಳಿದರು. ಮುಂದಿನ ವರ್ಷದವರೆಗೆ ಐಷಾರಾಮಿ ವಸ್ತುಗಳು ಮತ್ತು ಕಾರುಗಳ ಖರೀದಿಯನ್ನು ಸರ್ಕಾರ ನಿಷೇಧಿಸಿದೆ ಎಂದು ಮಾಹಿತಿ ನೀಡಿದ್ದಾರೆ.

 

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!