ಟಿಬಿ ಡ್ಯಾಂಗೆ ಸ್ಟಾಪ್ ಲಾಗ್ ಗೇಟ್ ಅಳವಡಿಕೆ ರೈತರು ಆತಂಕಪಡುವ ಅಗತ್ಯವಿಲ್ಲ: ಸಚಿವ ಜಮೀರ್

ದಿಗಂತ ವರದಿ ವಿಜಯನಗರ:

ತುಂಗಭದ್ರ ಜಲಾಶಯದ ಗೇಟ್ ಚೈನ್ ಲಿಂಕ್ ಕಟ್ ಆಗಿರುವ ಹಿನ್ನೆಲೆಯಲ್ಲಿ ಸದ್ಯಕ್ಕೆ ಸ್ಟಾಪ್ಲರ್ ಗೇಟ್ ಅಳವಡಿಸಲು ಕ್ರಮ ವಹಿಸಲಾಗಿದ್ದು, ಕೆಳ ಭಾಗದ ರೈತರು ಆತಂಕಕ್ಕೆ ಒಳಗಾಗುವ ಅಗತ್ಯವಿಲ್ಲ ಎಂದು ಜಿಲ್ಲಾ ಉಸ್ತುವಾರಿ ಸಚಿವ ಬಿ.ಜೆಡ್.ಜಮೀರ್ ಅಹ್ಮದ್ ಖಾನ್ ಹೇಳಿದರು.

ಜಿಲ್ಲಾಡಳಿತ, ಜಿ.ಪಂ. ಹಾಗೂ ಹೊಸಪೇಟೆ ನಗರಸಭೆ ಸಹಯೋಗದಲ್ಲಿ ಗುರುವಾರ ಹೊಸಪೇಟೆಯ ಜಿಲ್ಲಾ ಕ್ರೀಡಾಂಗಣದಲ್ಲಿ ಆಯೋಜಿಸಿದ್ದ ೭೮ನೇ ಸ್ವಾತಂತ್ರ‍್ಯೋತ್ಸವ ದಿನಾಚರಣೆ ನಿಮಿತ್ತ ೪೦೫ ಅಡಿ ಎತ್ತರದ ಧ್ವಜ ಸ್ತಂಭದ ಧ್ವಜಾರೋಹಣ ನೆರವೇರಿಸಿ ಅವರು ಮಾತನಾಡಿದರು.

ತುಂಗಭದ್ರಾ ಆಣೆಕಟ್ಟಿನ ೧೯ನೇ ಕ್ರಸ್ಟ್ ಗೇಟ್ ಚೈನ್ ಲಿಂಕ್ ತುಂಡಾಗಿದ್ದರಿAದ ಗೇಟ್ ಕೊಚ್ಚಿ ಹೋಗಿರುವುದು ದುರದೃಷ್ಟಕರ. ಇದರಿಂದ ಹೆಚ್ಚಿನ ಪ್ರಮಾಣದ ನೀರು ನದಿಗೆ ಹರಿದು ಹೋಗಿದ್ದರಿಂದ ರೈತರು ಆತಂಕದಲ್ಲಿದ್ದರು. ಆದರೆ, ನುರಿತ ಇಂಜಿನಿರ‍್ಸ್ ಮತ್ತು ತಾಂತ್ರಿಕ ತಂಡದವರು ಸ್ಟಾಪ್ಲರ್ ಗೇಟ್ ಅಳವಡಿಕೆಗೆ ತ್ವರಿತವಾಗಿ ಕ್ರಮ ಕೈಗೊಳ್ಳುತ್ತಿದ್ದಾರೆ. ತಾತ್ಕಾಲಿಕ ಗೇಟ್ ಅಳವಡಿಗೆ ನಿನ್ನೆ ಪೂಜಾ ನೆರವೇರಿಸಿದ್ದು, ನಾಲ್ಕೆöÊದು ದಿನಗಳಲ್ಲಿ ಕಾಮಗಾರಿ ಪೂರ್ಣಗೊಳ್ಳಲಿದೆ. ರೈತರು ಯಾವುದೇ ರೀತಿಯ ಆತಂಕ ಪಡುವ ಅಗತ್ಯವಿಲ್ಲ ಎಂದು ಧೈರ್ಯ ತುಂಬಿದರು.

ಇತ್ತೀಚೆಗೆ ನಡೆದ ಲೋಕಸಭೆ ಚುನಾವಣೆಯಲ್ಲಿ ರಾಜ್ಯದಲ್ಲಿ ಕಾಂಗ್ರೆಸ್ ೯ ಕ್ಷೇತ್ರಗಳಲ್ಲಿ ಮಾತ್ರ ಜಯ ಸಾಧಿಸಿದೆ. ಹೀಗಾಗಿ ರಾಜ್ಯ ಕಾಂಗ್ರೆಸ್ ಸರ್ಕಾರ ಜಾರಿ ಗೊಳಿಸಿದ್ದ ಎಲ್ಲ ಗ್ಯಾರೆಂಟಿಗಳನ್ನು ಸ್ಥಗಿಗೊಳಿಸಲಿದೆ ಎಂಬ ವದಂತಿಗೆ ಕಿವಿಗೊಡುವ ಅಗತ್ಯವಿಲ್ಲ. ಐದು ಗ್ಯಾರೆಂಟಿಗಳಿಗೆ ೫,೫೦೦ ಕೋಟಿ ರೂ. ವೆಚ್ಚವಾಗು ತ್ತದೆ. ಹೀಗಾಗಿ ಗ್ಯಾರೆಂಟಿ ಯೋಜನೆಗಳನ್ನು ಕೈಬಿಡುವಂತೆ ಕೆಲ ಶಾಸಕರು ಕೂಡಾ ಒತ್ತಾಯಿಸಿದ್ದರು. ಆದರೆ, ಗ್ಯಾರೆಂಟಿ ಸ್ಕೀಮ್‌ಗಳು ಲೋಕಸಭೆ ಚುನಾ ವಣೆ ದೃಷ್ಟಿಯಿಂದ ಜಾರಿಗೊಳಿಸಿಲ್ಲ. ಜನ ಕಲ್ಯಾಣಕ್ಕಾಗಿ ತಂದಿರುವ ಗ್ಯಾರೆಂಟಿ ಯೋಜನೆಗಳನ್ನು ಯಾವುದೇ ಕಾರಣಕ್ಕೂ ನಿಲ್ಲಿಸುವುದಿಲ್ಲ ಎಂದು ಸ್ವತಃ ಸಿಎಂ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ. ಹೀಗಾಗಿ ಗ್ಯಾರೆಂಟಿ ಯೋಜನೆಗಳು ನಿಲ್ಲುವ ಮಾತೇ ಇಲ್ಲವೆಂದು ಸಚಿವ ಜಮೀರ್ ಹೇಳಿದರು.

ಶಾಸಕ ಎಚ್.ಆರ್.ಗವಿಯಪ್ಪ, ಜಿಲ್ಲಾಧಿಕಾರಿ ಎಂ.ಎಸ್.ದಿವಾಕರ್, ಜಿ.ಪಂ. ಸಿಇಓ ನೊಂಗ್ಜಾಯ್ ಮೊಹಮ್ಮದ್ ಅಕ್ರಮ ಅಲಿ ಶಾ, ಎಸ್ಪಿ ಶ್ರೀಹರಿ ಬಾಬು ಬಿ.ಎಲ್., ಪ್ರಾದೇಶಿಕ ಉಪ ಅರಣ್ಯ ಸಂರಕ್ಷಣಾಧಿಕಾರಿಗಳಾದ ಅರ್ಸಲನ್, ಅಪರ ಜಿಲ್ಲಾಧಿಕಾರಿಗಳಾದ ಇ.ಬಾಲಕೃಷ್ಣಪ್ಪ ಸೇರಿದಂತೆ ವಿವಿಧ ಇಲಾಖೆಗಳ ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದ ಅಧಿಕಾರಿಗಳು ವೇದಿಕೆಯಲ್ಲಿದ್ದರು.

- Advertisement - Skool Shine Skool Shine

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!