ಜನಾರ್ಧನ ರೆಡ್ಡಿ ಹೇಳಿಕೆಗೆ ಹೆಚ್ಚು ಮಹತ್ವ ಕೊಡುವ ಅಗತ್ಯವಿಲ್ಲ: ಸಚಿವ ಬಿ.ನಾಗೇಂದ್ರ

ಹೊಸದಿಗಂತ ವರದಿ, ಬಳ್ಳಾರಿ:

ಜನಾರ್ಧನರೆಡ್ಡಿ ಸೋಲಿನ ಬ್ರಮೆಯಲ್ಲಿದ್ದಾರೆ, ಹತಾಷರಾಗಿ ನಾನಾ ಹೇಳಿಕೆಗಳನ್ನು ನೀಡುತ್ತಿದ್ದು, ಇದಕ್ಕೆ ಹೆಚ್ಚು ಮಹತ್ವ ಕೊಡುವ ಅಗತ್ಯವಿಲ್ಲ ಎಂದು ಜಿಲ್ಲಾ ಉಸ್ತುವಾರಿ ಸಚಿವ ಬಿ.ನಾಗೇಂದ್ರ ಅವರು ಹೇಳಿದರು.

ಕೆಆರ್ ಪಿ ಪಕ್ಷದ ಕಾರ್ಯಕರ್ತರಿಗೆ ತೊಂದರೆ ಕೊಡುತ್ತಿದ್ದಾರೆ ಎಂದು ಎಚ್ಚರಿಕೆ ನೀಡಿದ್ದ ಮಾಜಿ ಸಚಿವ ಜಿ.ಜನಾರ್ಧನರೆಡ್ಡಿ ಅವರ ಹೇಳಿಕೆಗೆ ಭಾನುವಾರ ನಗರದಲ್ಲಿ ಪ್ರತಿಕ್ರಿಯಿಸಿದರು.

ನಮ್ಮದು ಅಭಿವೃದ್ಧಿ ಪರವಾಗಿರುವ ಪಕ್ಷ, ಜನರ ಪರವಾಗಿ ಕೆಲಸ ಮಾಡುವ ಸರ್ಕಾರ ನಮ್ಮದು, ಹೀಗಿರುವಾಗ ಜನರಲ್ಲಿ‌ವಿನಾಕಾರಣ ಗೊಂದಲ ಮೂಡಿಸಲು ಜನಾರ್ಧನರೆಡ್ಡಿ ಮುಂದಾಗಿದ್ದಾರೆ, ಈ ಅವರ ಆಟ ನಡೆಯೋಲ್ಲ, ನಾವು ಯಾರಿಗೂ ತೊಂದರೆ ಕೊಟ್ಟಿಲ್ಲ, ಕೊಡೋದು ಇಲ್ಲ, ಹೆದರಿಕೆ, ಬೆದರಿಕೆ ಅವರ ಸಂಸ್ಕೃತಿ, ಅದು ನಮ್ಮ ಸಂಸ್ಕೃತಿ ಅಲ್ಲ, ಚುನಾವಣೆಯಲ್ಲಿ ಮಾತ್ರ ಪಕ್ಷ, ನಂತರ ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಅಭಿವೃದ್ಧಿ ಪರವಾಗಿ, ಜನರ ಪರವಾಗಿ ಕೆಲಸ ಮಾಡುವ ಸಂಸ್ಕೃತಿ ನಮ್ಮದು, ನಮಗೆ ಬಿಜೆಪಿ ಅವರು ಈ ಹಿಂದೆ ಸಾಕಷ್ಟು ಕಿರುಕುಳ ನೀಡಿದರು, ಆದರೂ ಹತಾಷರಾಗದೇ ಜನರ ಮಧ್ಯೆಯೇ ಉಳಿದು, ಅವರ ಕಷ್ಟ ಸುಖಗಳಿಗೆ ಸ್ಪಂದಿಸಿದ್ದೇವೆ, ಜನರ ಆರ್ಶಿವಾದದಿಂದ ಅಧಿಕಾರಕ್ಕೆ ಬಂದಿದ್ದೇವೆ, ನನ್ನ ಜಿಲ್ಲೆಯ, ನನ್ನ ಕ್ಷೇತ್ರದ ಜನರೇ ನನ್ನ ಉಸಿರು, ಅವರಿಗಾಗಿ‌ ನಾನು‌ಯ್ಯಾವ ತ್ಯಾಗಕ್ಕೂ ಸಿದ್ದ ಎಂದರು.

ಈ ಸಂದರ್ಭದಲ್ಲಿ ನಗರ ಶಾಸಕ ನಾರಾ ಭರತ್ ರೆಡ್ಡಿ, ರಾಜ್ಯಸಭಾ ಸದಸ್ಯ ಡಾ.ಸೈಯದ್ ನಾಸೀರ್ ಹುಸೇನ್ ಇತರರಿದ್ದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!