ಪ್ರಜ್ವಲ್ ರೇವಣ್ಣ ಪ್ರಕರಣವನ್ನ ಸಿಬಿಐಗೆ ವಹಿಸುವ ಅವಶ್ಯಕತೆ ಬರೋದಿಲ್ಲ: ಗೃಹ ಸಚಿವ ಪರಮೇಶ್ವರ್

ಹೊಸದಿಗಂತ ಡಿಜಿಟಲ್ ಡೆಸ್ಕ್:

ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರಿನಲ್ಲಿ ಮಾತನಾಡಿದ ಗೃಹ ಸಚಿವ ಡಾ.ಜಿ.ಪರಮೇಶ್ವರ್, “ಪ್ರಕರಣವನ್ನು ಎಸ್‌ಐಟಿ ಗಂಭೀರವಾಗಿ ತನಿಖೆ ನಡೆಸುತ್ತಿದೆ.” ಪ್ರಜ್ವಲ್ ರೇವಣ್ಣ ದೇಶ ತೊರೆದಿದ್ದಾನೆ. ಆತನನ್ನು ಕರೆತರಲು ಈಗಾಗಲೇ ಎಸ್‌ಐಟಿ ತಂಡ ಸಿಬಿಐ ನೆರವು ಪಡೆದು ಬ್ಲೂ ನೋಟಿಸ್ ಜಾರಿ ಮಾಡಿದೆ. ಪ್ರಜ್ವಲ್ ವಾಪಸ್ ಬರುವವರೆಗೆ ಶೀಘ್ರ ತನಿಖೆ ನಡೆಸುವುದು ಕಷ್ಟ ಎಂದರು.

ಮಹಿಳೆಯನ್ನು ಅಪಹರಿಸಿದ ಶಂಕೆಯ ಮೇಲೆ ರೇವಣ್ಣನನ್ನು ಬಂಧಿಸಲಾಯಿತು. ಇದಲ್ಲದೆ, ದೂರುದಾರರಿಂದಲೂ ಮಾಹಿತಿ ಸಂಗ್ರಹಿಸಲಾಗಿದ್ದು, ಎಸ್‌ಐಟಿ ಅಧಿಕಾರಿಗಳು ಪ್ರಕರಣದ ತನಿಖೆ ನಡೆಸುತ್ತಿದ್ದಾರೆ. ಇದೇ ವೇಳೆ ರೇವಣ್ಣ ಹಾಗೂ ಪ್ರಜ್ವಲ್ ಪ್ರಕರಣವನ್ನು ಸಿಬಿಐಗೆ ವಹಿಸಬೇಕು ಎಂದು ಎಚ್.ಡಿ.ಕುಮಾರಸ್ವಾಮಿ ಆಗ್ರಹಿಸಿದ್ದಾರೆ. ಎಸ್‌ಐಟಿ ತನಿಖೆಯ ಮೇಲೆ ನನಗೆ ನಂಬಿಕೆ ಇಲ್ಲ ಎಂದು ಕುಮಾರಸ್ವಾಮಿ ಹೇಳಿದ್ದಾರೆ.

ಆದರೆ ಎಸ್ ಐಟಿ ಬಗ್ಗೆ ಕುಮಾರಸ್ವಾಮಿಗೆ ಗೊತ್ತಿದೆ. ಎಸ್‌ಐಟಿ ತಂಡ ಸಮರ್ಥ ತನಿಖೆ ನಡೆಸುತ್ತಿದೆ. ಈ ಘಟನೆಯಲ್ಲಿ ನಾನಾಗಲಿ, ಸಿಎಂ ಆಗಲಿ, ಡಿಸಿಎಂ ಆಗಲಿ ಭಾಗಿಯಾಗಿಲ್ಲ. ಹೆಚ್​ಡಿಕೆ ಅವಧಿಯಲ್ಲೂ ಯಾವುದೇ ಪ್ರಕರಣ ಸಿಬಿಐಗೆ ನೀಡಿಲ್ಲ ಎಂದು ಹೇಳಿದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!