April 29, 2026
Wednesday, April 29, 2026
spot_img

ಸಿಲಿಂಡರ್ ಕೊರತೆ ಭೀತಿ ಬೇಡ: ಕಾರವಾರ ಡಿಸಿ ನೀಡಿದ್ರು ಗುಡ್ ನ್ಯೂಸ್!

ಹೊಸದಿಗಂತ ಕಾರವಾರ:

ಜಿಲ್ಲೆಯಲ್ಲಿ ಗೃಹ ಬಳಕೆಯ ಎಲ್‌ಪಿಜಿ ಸಿಲಿಂಡರ್‌ಗಳ ಕೊರತೆಯಿದೆ ಎಂಬ ವದಂತಿಗಳಿಗೆ ತೆರೆ ಎಳೆದಿರುವ ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯಾ ಅವರು, ಸಾರ್ವಜನಿಕರು ಯಾವುದೇ ಆತಂಕಕ್ಕೆ ಒಳಗಾಗುವ ಅಗತ್ಯವಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ಇತ್ತೀಚೆಗೆ ತೈಲ ಕಂಪನಿಗಳ (IOC, BPC, HPC) ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಜಿಲ್ಲಾಡಳಿತವು, ಜಿಲ್ಲೆಯಲ್ಲಿ ಸಾಕಷ್ಟು ಪ್ರಮಾಣದ ಎಲ್‌ಪಿಜಿ ದಾಸ್ತಾನು ಇರುವುದನ್ನು ಖಚಿತಪಡಿಸಿಕೊಂಡಿದೆ.

ಗ್ರಾಹಕರು ಗಾಬರಿಯಿಂದ ಅಥವಾ ತುರ್ತಾಗಿ ಅನಗತ್ಯ ಬುಕಿಂಗ್ ಮಾಡುವುದರಿಂದ ಮಾರುಕಟ್ಟೆಯಲ್ಲಿ ಕೃತಕ ಬೇಡಿಕೆ ಸೃಷ್ಟಿಯಾಗುತ್ತದೆ. ಇದನ್ನು ತಪ್ಪಿಸಲು ಗ್ರಾಹಕರು ಸಹಕರಿಸಬೇಕು ಎಂದು ಜಿಲ್ಲಾಧಿಕಾರಿಗಳು ಮನವಿ ಮಾಡಿದ್ದಾರೆ. ಸರ್ಕಾರಿ ಆಸ್ಪತ್ರೆಗಳು, ಶಾಲೆಗಳು, ಮತ್ತು ಅಂಗನವಾಡಿಗಳಂತಹ ಅಗತ್ಯ ಸೇವೆಗಳಿಗೆ ಯಾವುದೇ ಅಡೆತಡೆಯಿಲ್ಲದೆ ಪೂರೈಕೆ ಮಾಡಲು ತೈಲ ಕಂಪನಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ.

ಗ್ಯಾಸ್ ಸಿಲಿಂಡರ್‌ಗಳ ಅಕ್ರಮ ದಾಸ್ತಾನು, ಸಾಗಾಣಿಕೆ ಅಥವಾ ರಿಫಿಲಿಂಗ್ ಕಂಡುಬಂದಲ್ಲಿ ‘ಅಗತ್ಯ ವಸ್ತುಗಳ ಕಾಯ್ದೆ 1955’ ರ ಅಡಿಯಲ್ಲಿ ಕಠಿಣ ಕ್ರಮ ಕೈಗೊಳ್ಳಲಾಗುವುದು. ಕಾಳಸಂತೆಕೋರರ ಮೇಲೆ ನಿಗಾ ಇಡಲು ತಹಶೀಲ್ದಾರರಿಗೆ ನಿರ್ದೇಶನ ನೀಡಲಾಗಿದೆ.

ನಿಮಗೆ ಪೂರೈಕೆಯಲ್ಲಿ ಸಮಸ್ಯೆ ಎದುರಾದರೆ ತಕ್ಷಣ ಇಲ್ಲಿಗೆ ಕರೆ ಮಾಡಿ:

ಜಿಲ್ಲಾಧಿಕಾರಿಗಳ ಕಂಟ್ರೋಲ್ ರೂಮ್: 08382 229857

ಪೊಲೀಸ್ ಕಂಟ್ರೋಲ್ ರೂಮ್: 9480805200

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !