ನೋ ನೋ ನೋ ಮದುವೆ ಆಗಿಲ್ಲ… ಜಸ್ಟ್ ಎಂಗೇಜ್ಡ್: ಸಿದ್ಧಾರ್ಥ್ ಜೊತೆ ಸಂಬಂಧಕ್ಕೆ ಅದಿತಿ ರಿಯಾಕ್ಷನ್!

ಹೊಸದಿಗಂತ ಡಿಜಿಟಲ್ ಡೆಸ್ಕ್:

ಬಾಲಿವುಡ್ ನಟಿ ಅದಿತಿ ರಾವ್ ಹೈದರಿ(Aditi Rao Hydari) ಕಾಲಿವುಡ್ ನಟ ಸಿದ್ಧಾರ್ಥ್ (Siddarth) ಸದ್ದಿಲ್ಲದೇ ಮದುವೆಯಾ ಆಗಿದ್ದಾರೆ ಎಂದು ಸುದ್ದಿ ಆಗಿತ್ತು. ಆದ್ರೆ ಇದೀಗ ಎಲ್ಲದಕ್ಕೂ ಅದಿತಿ ಉತ್ತರ ನೀಡಿದ್ದಾರೆ.

ಹಿ ಸೇಡ್ ಎಸ್.. ಎಂಗೇಜ್ಡ್’ (Engaged) ಎಂದು ಸಿದ್ಧಾರ್ಥನ ಜೊತೆಗಿರುವ ಫೋಟೋ ಹಂಚಿಕೊಂಡಿದ್ದಾರೆ. ಇದೀಗ ತಾವು ನಿಶ್ಚಿತಾರ್ಥ ಮಾಡಿಕೊಂಡಿರುವುದಾಗಿ ಘೋಷಣೆ ನೀಡಿದ್ದಾರೆ.

ಈ ಜೋಡಿ ಹಲವು ವರ್ಷಗಳಿಂದ ಡೇಟಿಂಗ್ ಮಾಡುತ್ತಿತ್ತು. ಕಳೆದ ಮಾರ್ಚ್ 27ರಂದು ತೆಲಂಗಾಣದ ದೇವಸ್ಥಾನವೊಂದರಲ್ಲಿ ಅದಿತಿ ಮತ್ತು ಸಿದ್ಧಾರ್ಥ್ ರಹಸ್ಯವಾಗಿ ಮದುವೆಯಾಗಿದ್ದಾರೆ ಎಂಬ ವದಂತಿಗಳು ಹಬ್ಬಿದ್ದವು.

2021ರಲ್ಲಿ ‘ಮಹಾ ಸಮುದ್ರಂ’ ಸಿನಿಮಾ ವೇಳೆ, ಅದಿತಿ- ಸಿದ್ಧಾರ್ಥ್ ಪರಿಚಿತರಾದರು. ಅಲ್ಲಿಂದ ಶುರುವಾದ ಸ್ನೇಹ ಪ್ರೀತಿಗೆ ತಿರುಗಿತ್ತು. ಸಾಕಷ್ಟು ಪಾರ್ಟಿ ಮತ್ತು ಸೆಲೆಬ್ರಿಟಿ ಮದುವೆ ಸಮಾರಂಭಗಳಲ್ಲಿ ಇಬ್ಬರೂ ಜೊತೆಯಾಗಿಯೇ ಹೋಗುವ ಮೂಲಕ ಹೈಲೆಟ್ ಆದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!