ಹೊಸದಿಗಂತ ಡಿಜಿಟಲ್ ಡೆಸ್ಕ್:
ಬಿಜೆಪಿ ಹಿರಿಯ ನಾಯಕ ಎಲ್.ಕೆ.ಅಡ್ವಾಣಿ ಅವರಿಗೆ ‘ಭಾರತ ರತ್ನ’ ಕೊಟ್ಟಿದ್ದಕ್ಕೆ ನಮಗೆ ತಕರಾರಿಲ್ಲ. ಅವರು ದೇಶದ ಹಿರಿಯ ರಾಜಕಾರಣಿ. ಅವರಿಗೆ ಅಭಿನಂದನೆಗಳು ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.
ವಿಜಯಪುರ ಜಿಲ್ಲೆಯ ಬಸವನಬಾಗೇವಾಡಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಡಿಸಿಎಂ ಡಿ.ಕೆ.ಶಿವಕುಮಾರ್, ಅಡ್ವಾಣಿ ಅವರಿಗೆ ಭಾರತ ರತ್ನ ನೀಡಿದ್ದಕ್ಕೆ ನಮ್ಮ ತಕರಾರಿಲ್ಲ.
ಆದರೆ ಸಿದ್ಧಗಂಗಾ ಶ್ರೀಗಳಿಗೂ ಭಾರತ ರತ್ನ ಕೊಡಲಿ ಎಂದು ಆಗ್ರಹಿಸಿದರು.
ಸಿದ್ಧಗಂಗಾ ಶ್ರೀಗಳು ನಡೆದಾಡುವ ದೆವರು ಎಂದು ಖ್ಯಾತರಾದ ತ್ರಿವಿಧ ದಾಸೋಹಿ. ಶತಾಯುಷಿಗಳಾಗಿದ್ದರು. ಸಿದ್ಧಗಂಗಾ ಮಠದ ಡಾ.ಶಿವಕುಮಾರ ಸ್ವಾಮೀಜಿಗಳಿಗೆ ಮರಣೋತ್ತರ ಭಾರತ ರತ್ನ ನೀಡಲಿ. ಈ ಹಿಂದೆಯೂ ನಮ್ಮ ಸರ್ಕಾರ ಸಿದ್ಧಗಂಗಾ ಶ್ರೀಗಳಿಗೆ ಭಾರತ ರತ್ನ ನೀಡುವಂತೆ ಮನವಿ ಮಾಡಿತ್ತು.ಅವರಿಗೆ ಭಾರತ ರತ್ನ ಗೌರವ ಸಲ್ಲಿಸಬೇಕು ಎಂಬುದು ನಮ್ಮ ಒತ್ತಾಸೆ ಎಂದು ಹೇಳಿದರು.