Sunday, June 4, 2023

Latest Posts

ಬಿಜೆಪಿಯ ಯಾವುದೇ ಪದಾಧಿಕಾರಿಗಳು, ಮಹಾನಗರ ಪಾಲಿಕೆ ಸದಸ್ಯರು ರಾಜೀನಾಮೆ ಸಲ್ಲಿಸಿಲ್ಲ: ಸಂಜಯ ಕಪಟಕರ್

ಹೊಸದಿಗಂತ ವರದಿ ಹುಬ್ಬಳ್ಳಿ:

ಹು-ಧಾ ಸೆಂಟ್ರಲ್ ಕ್ಷೇತ್ರದಲ್ಲಿ ಮಾಜಿ ಸಿಎಂ ಜಗದೀಶ ಶೆಟ್ಟರ್ ಅವರಿಗೆ ಸೆಂಟ್ರಲ್ ಕ್ಷೇತ್ರದ ಟಿಕೆಟ್ ನೀಡಿದಿರುವುದು ಕೆಲವು ಉಹಾಪೋಹವನ್ನು ಸೃಷ್ಟಿ ಮಾಡಲಾಗುತ್ತಿದೆ. ಬಿಜೆಪಿಯ ಯಾವುದೇ ಪದಾಧಿಕಾರಿಗಳು, ಮಹಾನಗರ ಪಾಲಿಕೆ ಸದಸ್ಯರು ರಾಜೀನಾಮೆ ಸಲ್ಲಿಸಿಲ್ಲ ಎಂದು ಹು-ಧಾ ಮಹಾನಗರ ಜಿಲ್ಲಾಧ್ಯಕ್ಷ ಸಂಜಯ ಕಪಟಕರ್ ಹೇಳಿದರು.

ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಕುರಿತು ರಾಜ್ಯ ನಾಯಕರಿಗೂ ಯಾವುದೇ ಪತ್ರ ರವಾನಿಸಿಲ್ಲ. ಅವರ ಹೆಸರು‌ ಲಿಸ್ಟ್ ನಲ್ಲಿ ಇದೆ. ರಾಷ್ಟ್ರೀಯ ನಾಯಕರು ಅದರ ಬಗ್ಗೆ ತೀರ್ಮಾನ ಕೈಗೊಳ್ಳಲಿದ್ದಾರೆ. ಈ ನಡುವೆ ಬಿಜೆಪಿ ವಿವಿಧ ಘಟಕದ ಪದಾಧಿಕಾರಿಗಳು, ಮಹಾನಗರ ಪಾಲಿಕೆ ಸದಸ್ಯರು ರಾಜೀನಾಮೆ ನೀಡಿದ್ದೇವೆ ಎಂಬ ಸುದ್ದಿ ಹಬ್ಬಿದೆ ಎಂದರು‌.

ಇದುವರೆಗೂ ಯಾವುದೇ ಪದಾಧಿಕಾರಿಗಳು ರಾಜೀನಾಮೆ ಸಲ್ಲಿಸಿಲ್ಲ. ರಾಜ್ಯ ನಾಯಕರಿಗೂ ಸಲ್ಲಿಸಿಲ್ಲ ಎಂದು ಸ್ಪಷ್ಟ ಪಡಿಸಿದರು. ನಾನು ಕೂಡ ಕೆಲ ಪದಾಧಿಕಾರಿಗಳು, ಮಹಾನಗರ ಪಾಲಿಕೆ ಸದಸ್ಯರಿಗೆ ಕರೆ ಮಾಡಿ ಮಾತನಾಡಿದ್ದೇನೆ. ಅವರು ಪಕ್ಷದೊಂದಿಗೆ ಇರುವುದಾಗಿ ಹೇಳಿದ್ದಾರೆ ಎಂದರು.

ನಮ್ಮ ಪಕ್ಷದಲ್ಲಿ ದೇಶ ಮೊದಲು ಎಂಬ ಸಿದ್ಧಾಂತವಿದೆ. ವ್ಯಕ್ತಿ ಪೂಜೆಯಿಲ್ಲ. ರಾಷ್ಟ್ರೀಯ ನಾಯಕರ ತೀರ್ಮಾನಕ್ಕೆ‌ ಬದ್ಧರಾಗುತ್ತೇವೆ ಎಂದರು. ಮುಖಂಡರಾದ ವಿಜಯಾನಂದ ಶೆಟ್ಟಿ, ದತ್ತಮೂರ್ತಿ ಕುಲಕರ್ಣಿ, ರವಿ ನಾಯಕ, ಪ್ರಶಾಂತ ಹಾವಣಗಿ, ಮಂಜುನಾಥ ನಾಗನಗೌಡರ, ಗುರು ಪಾಟೀಲ ಇದ್ದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!