ಹೊಸದಿಗಂತ ಡಿಜಿಟಲ್ ಡೆಸ್ಕ್:
ಜೆಡಿಎಸ್ ಎಂಎಲ್ಸಿ ಸೂರಜ್ ರೇವಣ್ಣ ವಿರುದ್ಧ ಕೇಳಿಬಂದಿರುವ ಸಲಿಂಗ ಕಾಮ, ಅಸಹಜ ಲೈಂಗಿಕ ದೌರ್ಜನ್ಯ ಆರೋಪ ಬಗ್ಗೆ ತಮಗೆ ಇದುವರೆಗೆ ಅಧಿಕೃತವಾಗಿ ದೂರು ಬಂದಿಲ್ಲ ಎಂದು ಗೃಹ ಸಚಿವ ಡಾ. ಜಿ.ಪರಮೇಶ್ವರ್ ತಿಳಿಸಿದ್ದಾರೆ.
ಬೆಂಗಳೂರಿನಲ್ಲಿಂದು ಮಾತನಾಡಿದ ಅವರು, ಸೂರಜ್ ವಿರುದ್ಧ ಕೇಳಿ ಬಂದಿರುವ ಆರೋಪಕ್ಕೆ ಸಂಬಂಧಪಟ್ಟ ಹಾಸನದಲ್ಲಾಗಲಿ, ಬೆಂಗಳೂರಿನಲ್ಲಾಗಲಿ ಇನ್ನೂ ದೂರು ದಾಖಲಾಗಿಲ್ಲ. ಈ ಕುರಿತು ಮಾಧ್ಯಮಗಳಲ್ಲಿ ನೋಡಿದ್ದೇನೆ. ಇದರ ಬಗ್ಗೆ ಯಾವುದೇ ದೂರು ಬಂದಿಲ್ಲ ಎಂದು ಹೇಳಿದ್ದಾರೆ.