Wednesday, October 15, 2025

ಆರ್‌ಎಸ್‌ಎಸ್ ಬ್ಯಾನ್ ಮಾಡಲು ಯಾರಿಂದಲೂ ಸಾದ್ಯವಿಲ್ಲ: ಯತ್ನಾಳ್

ಹೊಸ ದಿಗಂತ ವರದಿ,ಮಂಡ್ಯ:

ಪ್ರಿಯಾಂಕ್ ಖರ್ಗೆ ಒಬ್ಬ ಬಚ್ಚ, ನೆಹರು ಸೇರಿದಂತೆ ಯಾರಿಂದಲೂ ಆರ್‌ಎಸ್‌ಎಸ್ ನಿಷೇಧ ಮಾಡಲಾಗಿಲ್ಲ. ಇವನು ಮಾಡ್ತಾನಾ ಎಂದು ಏಕವಚನದಲ್ಲಿ ವಿಜಯನಗರ ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್ ಪ್ರಶ್ನಿಸಿದರು.

ಆರ್‌ಎಸ್‌ಎಸ್ ಬ್ಯಾನ್ ಮಾಡಲು ಸಾದ್ಯವಿಲ್ಲ. ಮುಸ್ಲಿಂ ಒಲೈಕೆಗಾಗಿ ಈ ರೀತಿ ಹೇಳ್ತಾರೆ. ಆರ್‌ಎಸ್‌ಎಸ್ ಕಬ್ಜ ಮಾಡಿಲ್ಲ. ಭರತ ಭೂಮಿಗೆ ನಮಸ್ಕಾರ ಮಾಡಿ ಹೋಗುತ್ತಾರೆ. ಹಿಂದುಗಳ ದೇವಸ್ಥಾನ ಧಾರ್ಮಿಕ ದತ್ತಿ ಇಲಾಖೆಗೆ ಸೇರಿಸಿದ್ದಾರೆ. ಮಸೀದಿ ವಶ ಮಾಡಿಕೊಂಡಿದ್ದಾರಾ ಎಂದು ಏರುದನಿಯಲ್ಲಿ ಪ್ರಶ್ನಿಸಿದರು.

error: Content is protected !!