ಬಿಎಸ್‌ವೈರನ್ನು ಯಾರೂ ಕಡೆಗಣಿಸಿಲ್ಲ, ಅವರು ರಾಜ್ಯಕ್ಕೇ ದೊಡ್ಡ ಶಕ್ತಿ : ಬಿ.ವೈ.ವಿಜಯೇಂದ್ರ

ಹೊಸದಿಗಂತ ವರದಿ ಕಲಬುರಗಿ:

ರಾಜ್ಯ ಬಿಜೆಪಿಗೆ ಬಿ.ಎಸ್.ಯಡಿಯೂರಪ್ಪ ನವರು ಬಹುದೊಡ್ಡ ಶಕ್ತಿಯಾಗಿದ್ದು,ಪಕ್ಷದಲ್ಲಿ ಅವರನ್ನು ಕಡೆಗಣೆಸುವ ವಿಚಾರ ಸತ್ಯಕ್ಕೆ ದೂರವಾದ ಮಾತಾಗಿದೆ ಎಂದು ರಾಜ್ಯ ಬಿಜೆಪಿ ಉಪಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದರು.

ಶನಿವಾರ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಯಡಿಯೂರಪ್ಪ ಅವರು ಪಕ್ಷದ ಸಂಘಟನೆಯಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡಿದ್ದಾರೆ. ಹೀಗಾಗಿ ಪಕ್ಷಕ್ಕೆ ಯಡಿಯೂರಪ್ಪ ಅವರು ಒಂದು ದೊಡ್ಡ ಶಕ್ತಿ ಇದ್ದಂಗೆ.ಈ ಮಾತನ್ನು ಈಗಾಗಲೇ ಅಮಿತ್ ಷಾ ಹಾಗೂ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅನೇಕ ಬಾರಿ ಹೇಳಿದ್ದಾರೆ ಎಂದರು.

ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ 130ಕ್ಕೂ ಅಧಿಕ ಸ್ಥಾನಗಳನ್ನು ಗೆಲ್ಲಲಿದ್ದು,ಈ ನಿಟ್ಟಿನಲ್ಲಿ ಯಡಿಯೂರಪ್ಪ ಕಾಯೋ೯ನ್ಮೋಖರಾಗಿ ಪಕ್ಷದ ಸಂಘಟನೆ ಮಾಡುತ್ತಿದ್ದಾರೆ. ಅವರ ಬಗ್ಗೆ ಯಾರಿಗೂ ಯಾವುದೇ ರೀತಿಯ ಅನುಮಾನ ಬೇಡ ಎಂದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!