ಹೊಸದಿಗಂತ ಡಿಜಿಟಲ್ ಡೆಸ್ಕ್:
ಬೆಳಗಾವಿ ಟಿಕೆಟ್ ನನಗೇ ಸಿಗುತ್ತದೆ ಎಂದು ವಿಶ್ವಾಸ ವ್ಯಕ್ತಪಡಿಸಿರುವ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್, ಟಿಕೆಟ್ ಘೋಷಣೆಯಾದ ಮೇಲೆ ಅಲ್ಲಿಗೆ ತೆರಳಿ ಪ್ರಚಾರ ನಡೆಸುತ್ತೇನೆ. ನನಗೆ ಟಿಕೆಟ್ ತಪ್ಪಿಸುವ ಪ್ರಯತ್ನ ಯಾರೂ ಮಾಡಿಲ್ಲ ಎಂದು ಸ್ಪಷ್ಟಪಡಿಸಿದರು.
ಮಾಧ್ಯಮದವರೊಂದಿಗೆ ಸಂವಾದದಲ್ಲಿ ಮಾತನಾಡಿದ ಅವರು, ಪಕ್ಷದ ಅಭ್ಯರ್ಥಿಗಳ ಪಟ್ಟಿಯನ್ನು ಶೀಘ್ರದಲ್ಲೇ ಪ್ರಕಟಿಸಲಾಗುವುದು. ಬೆಳಗಾವಿಗೆ ನನ್ನ ಹೆಸರು ಅಂತಿಮವಾಗುವ ಸಾಧ್ಯತೆ ಇದ್ದು, ಈಗಾಗಲೇ ಅಲ್ಲಿನ ಅಧಿಕಾರಿಗಳೊಂದಿಗೆ ಮಾತನಾಡಿದ್ದೇನೆ. ಅಧಿಕೃತವಾಗಿ ಟಿಕೆಟ್ ಘೋಷಣೆಯಾದ ನಂತರ ಚುನಾವಣಾ ಪ್ರಚಾರ ನಡೆಸಲಾಗುವುದು ಎಂದರು.
ಬೆಳಗಾವಿಯ ಬಿಜೆಪಿಯ ಹಿರಿಯ ಮುಖಂಡರಾದ ಪ್ರಭಾಕರ ಕೋರೆ, ಈರಣ್ಣ ಕಡಾಡಿ ಅವರೊಂದಿಗೆ ಚರ್ಚೆ ನಡೆಸಿದ್ದೇನೆ. ಒಟ್ಟಾಗಿ ಚುನಾವಣೆ ಎದುರಿಸೋಣ. ನರೇಂದ್ರ ಮೋದಿ ಅವರನ್ನು ಪ್ರಧಾನಿ ಮಾಡುವ ಆಸೆಯನ್ನು ಮತ್ತೊಮ್ಮೆ ವ್ಯಕ್ತಪಡಿಸಿದ್ದಾರೆ ಎಂದರು.