ಎಲ್ಲೋ ಕುಳಿತು ಸಿದ್ಧಪಡಿಸಿದ ಜಾತಿ ಗಣತಿಯನ್ನು ಯಾರೂ ಒಪ್ಪಬೇಕಿಲ್ಲ: ಆರ್‌.ಅಶೋಕ್

ಹೊಸದಿಗಂತ ಡಿಜಿಟಲ್ ಡೆಸ್ಕ್:

ಎಲ್ಲೋ ಕುಳಿತು ಸಿದ್ಧಪಡಿಸಿದ ಜಾತಿ ಗಣತಿ ವರದಿಯನ್ನು ರಾಜ್ಯದ ಯಾರೊಬ್ಬರೂ ಒಪ್ಪಬೇಕಿಲ್ಲ ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಹೇಳಿದ್ದಾರೆ.

ಮುಖ್ಯಮಂತ್ರಿ ಸಿದ್ದರಾಮಯ್ಯನವರ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ವ್ಯರ್ಥವಾಗಿದೆ. ಸಚಿವರು ಅಭಿಪ್ರಾಯ ನೀಡುವಂತೆ ಸೂಚಿಸಲಾಗಿದೆ. ಸಂಪುಟದ ಸಚಿವರನ್ನೇ ಜಾತಿಯ ಬಲೆಯಲ್ಲಿ ಸಿಕ್ಕಿ ಹಾಕಿಸಿ ಅಪಮಾನ ಮಾಡಲಾಗುತ್ತಿದೆ. ಈ ವರದಿಯಲ್ಲಿ ಸಹಿ ಹಾಕದೆ ಕಾಂತರಾಜು ಓಡಿ ಹೋಗಿದ್ದಾರೆ. ಜಯಪ್ರಕಾಶ್‌ ಹೆಗ್ಡೆ ವರದಿಯನ್ನು ತೆಗೆದು ನೋಡಿದಾಗ ಅದು ಅಸಲಿ ಅಲ್ಲ, ಕೇವಲ ಒಂದು ಪ್ರತಿ ಎಂದು ತಿಳಿದು ಬಂದಿದೆ ಎಂದರು.

ಸಿದ್ದರಾಮಯ್ಯನವರ ಗ್ಯಾಂಗ್‌ ಎಲ್ಲೋ ಕುಳಿತು ಸಿದ್ಧಪಡಿಸಿದ ಈ ವರದಿ ಪ್ರಕಾರ 10 ವರ್ಷದಲ್ಲಿ ಒಂದು ಕೋಟಿ ಮಕ್ಕಳು ಹುಟ್ಟಿದ್ದಾರೆ ಎಂದುಕೊಂಡರೆ, ಇವರನ್ನು ಯಾವ ವರ್ಗಕ್ಕೆ ಸೇರಿಸುತ್ತಾರೆ? ಹೊಸ ಪೀಳಿಗೆಯ ಭವಿಷ್ಯವೇನು? ಮೀಸಲಾತಿಯ ಮಾನದಂಡವೇನು? ಎಂದು ಪ್ರಶ್ನಿಸಿದ್ದಾರೆ.

ಎಲ್ಲ ಸಮುದಾಯದವರು ಜಾತಿ ಗಣತಿ ವರದಿ ವಿರುದ್ಧ ಪ್ರತಿಭಟನೆ ಮಾಡಲಿದ್ದಾರೆ. ಎಲ್ಲರಿಗೂ ಇದರಲ್ಲಿ ನಂಬಿಕೆ ಹೋಗಿದೆ. ಕಾಂಗ್ರೆಸ್‌ನ ಶಾಸಕರು ಯಾವುದಾದರೂ ಒಂದು ಕಡೆ ನಿಲ್ಲಬೇಕು. ಕೆಲವು ಶಾಸಕರು ಈ ವರದಿ ಒಪ್ಪಿಲ್ಲ. ಸಂಕಟ ಬಂದಾಗ ವೆಂಕಟರಮಣ ಎಂಬಂತೆ, ಸಿಎಂ ಸಿದ್ದರಾಮಯ್ಯ ಜಾತಿ ಗಣತಿ ವರದಿಯನ್ನು ಹಿಡಿದುಕೊಂಡಿದ್ದಾರೆ ಅಷ್ಟೇ ಎಂದರು.

- Advertisement - Ply
Nova

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!