April 10, 2026
Friday, April 10, 2026
spot_img

ಮದುವೆಗೆ ಮುನ್ನ ಯಾರೂ ಯಾರನ್ನೂ ನಂಬಬಾರದು: ವಿವಾಹಪೂರ್ವ ಸಂಬಂಧದ ಕುರಿತು ಸುಪ್ರೀಂ ಎಚ್ಚರಿಕೆ!

ಹೊಸದಿಗಂತ ಡಿಜಿಟಲ್ ಡೆಸ್ಕ್:

ವಿವಾಹ ಪೂರ್ವ ಸಂಬಂಧದ ಬಗ್ಗೆ ಸುಪ್ರೀಂಕೋರ್ಟ್ ಸೋಮವಾರ ಎಚ್ಚರಿಕೆ ನೀಡಿದೆ.

ಅತ್ಯಾಚಾರ ಮತ್ತು ಮದುವೆ ಭರವಸೆ ಆರೋಪಕ್ಕೆ ಸಂಬಂಧಿಸಿದ ಪ್ರಕರಣವೊಂದರ ವಿಚಾರಣೆ ವೇಳೆ, ನ್ಯಾಯಮೂರ್ತಿಗಳಾದ ಬಿ.ವಿ.ನಾಗರತ್ನ ಮತ್ತು ಉಜ್ಜಲ್ ಭುಯಾನ್ ಅವರಿದ್ದ ಪೀಠ,ಮದುವೆಗೂ ಮುನ್ನ ದೈಹಿಕ ಸಂಬಂಧ ಬೆಳೆಸುವ ಬಗ್ಗೆ ಎಚ್ಚರಿಕೆ ವಹಿಸಬೇಕು ಎಂದು ತಿಳಿಸಿದೆ.

ಈಗಾಗಲೇ ಎರಡನೇ ಮದುವೆಯಾಗಿದ್ದರೂ, ಮತ್ತೋರ್ವ ಮಹಿಳೆಯನ್ನು ನಂಬಿಸಿ ಆಕೆಯೊಂದಿಗೆ ದೈಹಿಕ ಸಂಬಂಧ ಹೊಂದಿದ್ದ ಆರೋಪಿಯ ಜಾಮೀನು ಅರ್ಜಿಯ ವಿಚಾರಣೆ ವೇಳೆ ಕೋರ್ಟ್, ಮದುವೆಗೆ ಮುನ್ನ ಹುಡುಗ ಮತ್ತು ಹುಡುಗಿ ಅಪರಿಚಿತರು. ಅವರ ಸಂಬಂಧ ಏನೇ ಇರಲಿ, ಮದುವೆಗೂ ಮುನ್ನ ಅವರು ಹೇಗೆ ದೈಹಿಕ ಸಂಬಂಧದಲ್ಲಿ ಇರುತ್ತಾರೆ ಎಂಬುದನ್ನು ಅರ್ಥಮಾಡಿಕೊಳ್ಳಲು ನಾವು ವಿಫಲರಾಗಿದ್ದೇವೆ ಎಂದು ಹೇಳಿದೆ.

2022 ರಲ್ಲಿ ಮ್ಯಾಟ್ರಿಮೋನಿಯಲ್ ಸೇವೆಗಳ ವೆಬ್‌ಸೈಟ್ ಮೂಲಕ ಮಹಿಳೆ ಮತ್ತು ಪುರುಷ ಭೇಟಿಯಾದರು. ಪುರುಷ ಮಹಿಳೆಗೆ ತಾನು ಮದುವೆಯಾಗುವುದಾಗಿ ಭರವಸೆ ನೀಡಿದ ನಂತರ ಮಹಿಳೆ ದುಬೈನಲ್ಲಿ ಭೇಟಿಯಾದಾಗ ದೈಹಿಕ ಸಂಬಂಧ ಹೊಂದಿರುವುದಾಗಿ ಪ್ರಾಸಿಕ್ಯೂಷನ್ ಆರೋಪಿಸಿದರು. ಮಹಿಳೆಯ ಅನುಮತಿ ಇಲ್ಲದ ವಿಡಿಯೋಗಳನ್ನು ರೆಕಾರ್ಡ್ ಮಾಡಲಾಗಿದ್ದು, ಅವುಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಅಪ್ ಲೋಡ್ ಮಾಡುವ ಬೆದರಿಕೆ ಹಾಕಲಾಗಿದೆ ಎಂದು ಪ್ರಾಸಿಕ್ಯೂಷನ್ ಹೇಳಿದರು.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !