ಹೊಸದಿಗಂತ ಡಿಜಿಟಲ್ ಡೆಸ್ಕ್:
ಸೋತ ಪಕ್ಷವೂ ಮತ್ತೆ ಅಧಿಕಾರಕ್ಕೆ ಬರಲು 5 ವರ್ಷಗಳ ನಂತರ ಅವಕಾಶವಿದೆ. ಪ್ರತಿಪಕ್ಷಗಳು ಸರ್ಕಾರ ಉರುಳಿಸುವ ಕೆಲಸಕ್ಕೆ ಮುಂದಾಗಬಾರದು ಎಂದು ಸಾಹಿತಿ ಹಂಪ ನಾಗರಾಜಯ್ಯ ಹೇಳಿದರು.
ಹತ್ತು ದಿನಗಳ ಅದ್ಧೂರಿ ದಸರಾ ಆಚರಣೆಗೆ ಚಾಲನೆ ನೀಡಿದ ನಂತರ ಮಾತನಾಡಿ, ದಸರಾ ಎಂಬುದು ಮತ ಧರ್ಮಗಳ ತಾರತಮ್ಯ ಇಲ್ಲದ ಸರ್ವ ಜನಾಂಗದ ಹಬ್ಬ. ಆಸ್ತಿಕತೆ, ನಾಸ್ತಿಕತೆ ಎಂಬುದು ದಸರಾದಲ್ಲಿ ಅಪ್ರಸ್ತುತ. ದಸರಾ ಅರಮನೆ ಹಬ್ಬವಲ್ಲ, ಜನ ಆರಿಸಿದ ಸರ್ಕಾರ ನಡೆಸುವ ಹಬ್ಬ ಎಂದರು.
ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್ ಎಷ್ಟೇ ಅಡ್ಡಿ ಆತಂಕಗಳು ಎದುರಾಗುತ್ತಿದ್ದರೂ ಎದೆಗುಂದದೆ ಸೆಡ್ಡು ಹೊಡೆದು ಗಟ್ಟಿಯಾಗಿ ನಿಂತಿದ್ದಾರೆ. ಜೀವನವೇ ದೊಡ್ಡ ಅಖಾಡ, ಧೃತಿಗೆಡದೆ ತೊಡೆತಟ್ಟಿ ನಿಲ್ಲಲೇಬೇಕು. ಸಜ್ಜನಿಕೆ, ಸೌಮ್ಯ ಸ್ವಭಾವ ದೌರ್ಬಲ್ಯವಲ್ಲ ಎಂದರು. ಆ ಮೂಲಕ ಹಂಪ ನಾಗರಾಜಯ್ಯ ಪರೋಕ್ಷವಾಗಿ ಸಿದ್ದರಾಮಯ್ಯಗೆ ಧೈರ್ಯ ತುಂಬಿದರು. ಜತೆಗೆ, ಸಿಎಂ, ಡಿಸಿಎಂ ಒಂದು ರೀತಿಯಲ್ಲಿ ಗರಡಿ ಮನೆ ಆಳಿನಂತೆ ಜಟ್ಟಿಗಳು ಬಣ್ಣಿಸಿದರು.