ಯಾರೂ ಆತಂಕಕ್ಕೊಳಗಾಗುವುದು ಬೇಡ, ನಾನು ಆರೋಗ್ಯವಾಗಿದ್ದೇನೆ: ಎಚ್‌.ಡಿ.ದೇವೇಗೌಡ

ಹೊಸ ದಿಗಂತ ಡಿಜಿಟಲ್ ಡೆಸ್ಕ್:

ಬೆಂಗಳೂರಿನ ಮಣಿಪಾಲ್‌ ಆಸ್ಪತ್ರೆಗೆ ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡ ಅವರು ದಾಖಲಾಗಿದ್ದು,ತಾನು ಆರೋಗ್ಯವಾಗಿದ್ದು, ಸಾಮಾನ್ಯ ಆರೋಗ್ಯ ತಪಾಸಣೆಗಾಗಿ ಆಸ್ಪತ್ರೆಗೆ ಬಂದಿದ್ದಾಗಿ ಹೇಳಿದ್ದಾರೆ.
ಈ ಕುರಿತು ಟ್ವಿಟ್ ಮಾಡಿರುವ ಅವರು, ನಾನು ರುಟೀನ್‌ ಆರೋಗ್ಯ ತಪಾಸಣೆಗಾಗಿ ಆಸ್ಪತ್ರೆಗೆ ಬಂದಿದ್ದೇನೆ. ಯಾರೂ ಆತಂಕಕ್ಕೊಳಗಾಗುವ, ಗೊಂದಲಕ್ಕೆ ಬೀಳುವ ಅವಶ್ಯಕತೆ ಇಲ್ಲ. ನಾನು ಇನ್ನೊಂದೆರಡು ದಿನದಲ್ಲಿ ಮನೆಗೆ ಮರಳುತ್ತೇನೆʼ ಎಂದು ದೇವೇಗೌಡ ಅವರು ಟ್ವೀಟ್‌ ಮಾಡಿದ್ದಾರೆ.
ಸೋಮವಾರದವರೆಗೂ ಮನೆಯಲ್ಲಿಯೇ ವಿಶ್ರಾಂತಿ ಪಡೆಯುತ್ತಿದ್ದ ಅವರನ್ನು ಕುಟುಂಬದವರನ್ನು ಹೊರತುಪಡಿಸಿ ಬೇರೆ ಯಾರಿಗೂ ಭೇಟಿಗೆ ಅವಕಾಶ ನೀಡಲಾಗುತ್ತಿರಲಿಲ್ಲ. ಇದೀಗ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!