ಹೊಸದಿಗಂತ ಡಿಜಿಟಲ್ ಡೆಸ್ಕ್:
ಅರ್ಥಶಾಸ್ತ್ರದ ಬಗ್ಗೆ ತಿಳಿದೋರು ಯಾರೂ ಬೆಲೆ ಏರಿಕೆ ವಿರೋಧ ಮಾಡಲ್ಲ ಎಂದು ಮಾಜಿ ಸಚಿವ ದೇಶಪಾಂಡೆ ಬೆಲೆ ಏರಿಕೆಯನ್ನು ಸಮರ್ಥನೆ ಮಾಡಿಕೊಂಡಿದ್ದಾರೆ.
ಬೆಲೆ ಏರಿಕೆ ವಿರೋಧಿಸಿ ಬಿಜೆಪಿ ಅಹೋರಾತ್ರಿ ಧರಣಿ ಮಾಡುವುದು ಅವರ ಇಷ್ಟ. ಆದರೆ, ಅದರಲ್ಲಿ ಯಶಸ್ಸು ಸಿಗೋದಿಲ್ಲ. ಬಿಜೆಪಿ ಅಧಿಕಾರದಲ್ಲಿ ಬೆಲೆ ಏರಿಕೆ ಮಾಡಿರಲಿಲ್ವಾ? ಬೆಲೆ ಏರಿಕೆಗೆ ಕೇಂದ್ರ ಸರ್ಕಾರದ ನೀತಿಗಳೇ ಪ್ರಮುಖ ಕಾರಣ ಎಂದು ಆರೋಪ ಮಾಡಿದರು.
ಅರ್ಥಶಾಸ್ತ್ರದ ಬಗ್ಗೆ ಗೊತ್ತಿರುವವರು ಯಾರು ಬೆಲೆ ಏರಿಕೆ ವಿರೋಧಿಸಲ್ಲ ಇದು ರಿಯಾಲಿಟಿ. ಇದನ್ನ ಎಲ್ಲರೂ ಅರ್ಥ ಮಾಡಿಕೊಳ್ಳಬೇಕು ಎಂದು ತಿಳಿಸಿದ್ದಾರೆ.