ಹೊಸದಿಗಂತ ಡಿಜಿಟಲ್ ಡೆಸ್ಕ್:
ಇಂಡಿಯನ್ ಪ್ರೀಮಿಯರ್ ಲೀಗ್ ಟಿ20 ಕ್ರಿಕೆಟ್ ಟೂರ್ನಿಯ ಫೈನಲ್ ಪಂದ್ಯ ಇಂದು ಗುಜರಾತ್ನ ಅಹಮದಾಬಾದ್ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆಯಲಿದ್ದು, ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಪಂಜಾಬ್ ಕಿಂಗ್ಸ್ ಸೆಣಸಲಿವೆ.
ಆರ್‌ಸಿಬಿ ಗೆಲುವಿಗಾಗಿ ಕರ್ನಾಟಕದಾದ್ಯಂತ ಅಭಿಮಾನಿಗಳ ಹಾರೈಕೆ, ಪ್ರಾರ್ಥನೆ ಸಲ್ಲಿಕೆಯಾಗುತ್ತಿವೆ. ಇದೇ ಸಂದರ್ಭದಲ್ಲಿ, ಮುಂಜಾಗ್ರತಾ ಕ್ರಮವಾಗಿ ಬೆಂಗಳೂರಿನಲ್ಲಿ ಪೊಲೀಸರಿಗೆ ಕಟ್ಟೆಚ್ಚರ ವಹಿಸಲು ಸೂಚನೆ ನೀಡಲಾಗಿದೆ.
ಸಂಭ್ರಮಾಚರಣೆ ನೆಪದಲ್ಲಿ ಯಾರೂ ಅತಿರೇಕದ ವರ್ತನೆ ತೋರದಂತೆ, ಒಂದು ವೇಳೆ ತೋರಿದರೆ ಕ್ರಮ ಕೈಗೊಳ್ಳುವಂತೆ ಮುನ್ನೆಚ್ಚರಿಕೆ ವಹಿಸಲು ಪೊಲೀಸ್ ಕಮಿಷನರ್ ದಯಾನಂದ್ ಸೂಚನೆ ನೀಡಿದ್ದಾರೆ. ಎಲ್ಲ ಡಿಸಿಪಿಗಳು ಹಾಗೂ ಎಸಿಪಿಗಳಿಗೆ ನಿರ್ದೇಶನ ನೀಡಲಾಗಿದೆ.