ಧಾರ್ಮಿಕ ಆಚರಣೆಗೆ ಶಾಲೆಗಳಲ್ಲಿ ಅವಕಾಶವಿಲ್ಲ:‌ ಸರ್ಕಾರದ ನಿಲುವನ್ನು ಪುನರುಚ್ಚರಿಸಿದ ಸಚಿವ ಬಿ.ಸಿ.ನಾಗೇಶ್

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ಸುಪ್ರೀಂಕೋರ್ಟ್‌ನಲ್ಲಿ ಹಿಜಾಬ್‌ ಕುರಿತ ಅರ್ಜಿ ವಿಚಾರಣೆ ಸಂಭಂಧಿಸಿದಂತೆ ವಿಭಜಿತ ತೀರ್ಪು ನೀಡಿದೆ. ಈ ಬಗ್ಗೆ ಪ್ರತಿಕ್ರಿಯಿಸಿದ ಶಿಕ್ಷಣ ಸಚಿವ ಬಿ.ಸಿ.ನಾಗೇಶ್‌ ಸುಪ್ರೀಂ ಕೋರ್ಟ್ ತೀರ್ಪನ್ನು ಸ್ವಾಗತಿಸುತ್ತೇವೆ.

ವಿಶ್ವಾದ್ಯಂತ ಮಹಿಳೆಯರು ಹಿಜಾಬ್ ವಿರುದ್ಧ ಧ್ವನಿ ಎತ್ತಿ, ಪ್ರತಿಭಟನೆ ನಡೆಸುತ್ತಿರುವ ಸಂದರ್ಭದಲ್ಲಿ ಸ್ತ್ರೀ ಸ್ವಾತಂತ್ರ್ಯ ಪರವಾಗಿ ತೀರ್ಪು ಬರುತ್ತೆ ಅಂತ ನಿರೀಕ್ಷಿಸಲಾಗಿತ್ತು. ಆದರೆ, ವಿಭಜಿತ ತೀರ್ಪು ಬಂದಿದೆ. ಸುಪ್ರೀಂನಿಂದ ತೀರ್ಪು ಬರುವವರೆಗೆ ಕರ್ನಾಟಕ ಹೈಕೋರ್ಟ್ ಆದೇಶವನ್ನು ಅನುಸರಿಸಲಾಗುತ್ತದೆ ಎಂದರು. ಸರ್ಕಾರ ಆದೇಶದಂತೆ ರಾಜ್ಯದ ಶಿಕ್ಷಣ ಸಂಸ್ಥೆಗಳಲ್ಲಿ ಯಾವುದೇ ಧಾರ್ಮಿಕ ಆಚರಣೆಗಳಿಗೆ ಅವಕಾಶ ನೀಡಲ್ಲ ಎಂಬ ಮಾತನ್ನು ಹೇಳಿದರು.

ಪ್ರಪಂಚದಾದ್ಯಂತ ಮಹಿಳೆಯರು ಸ್ವಾತಂತ್ರ್ಯಕ್ಕಾಗಿ ಪ್ರತಿಭಟನೆಗಳನ್ನು ನಡೆಸುತ್ತಿದ್ದಾರೆ. ಇರಾನ್​ನಂಥ ಇಸ್ಲಾಮಿಕ್ ದೇಶಗಳಲ್ಲಿಯೇ ಹಿಜಾಬ್‌ ವಿರುದ್ಧ ಪ್ರತಿಭಟನೆ ನಡೆಯುತ್ತಿದೆ. ಈ ಎಲ್ಲಾ ಅಂಶಗಳನ್ನು ಗಮನಿಸಿ ಸುಪ್ರೀಂಕೋರ್ಟ್‌ ಕರ್ನಾಟಕ ಹೈಕೋರ್ಟ್ ಆದೇಶವನ್ನು ಎತ್ತಿಹಿಡಿಯುತ್ತದೆ ಎಂದು ನಿರೀಕ್ಷೆ ಇತ್ತು ಎಂದರು. ಅದೇನೇ ಇರಲಿ ಸುಪ್ರೀಂಕೋರ್ಟ್‌ನಿಂದ ಸೂಕ್ತ ತೀರ್ಪು ಬರುವವರೆಗೂ ಹಿಜಾಬ್ ಬಗ್ಗೆ ಸರ್ಕಾರ ಈ ಹಿಂದೆ ಹೊರಡಿಸಿದ್ದ ಅಧಿಸೂಚನೆ ಊರ್ಜಿತದಲ್ಲಿ ಇರುತ್ತದೆ. ಇದರಲ್ಲಿ ಯಾವುದೇ ಗೊಂದಲವಿಲ್ಲ ಎಂದು ಸ್ಪಷ್ಟಪಡಿಸಿದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!