ಪ್ರಜ್ವಲ್‌ ರೇವಣ್ಣ ರಾಜತಾಂತ್ರಿಕ ಪಾಸ್‌ಪೋರ್ಟ್‌ ಹಿಂಪಡೆಯಲು ಯಾವುದೇ ಅನುಮತಿ ಬಂದಿಲ್ಲ: ಸಚಿವಾಲಯ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: 

ಪ್ರಜ್ವಲ್‌ ರೇವಣ್ಣ ಅವರ ರಾಜತಾಂತ್ರಿಕ ಪಾಸ್‌ಪೋರ್ಟ್‌ಹಿಂಪಡೆಯಲು ನ್ಯಾಯಾಲಯದಿಂದ ಯಾವುದೇ ಆದೇಶ ಬಂದಿಲ್ಲ ಎಂದು ವಿದೇಶಾಂಗ ಸಚಿವಾಲಯ (MEA) ತಿಳಿಸಿದೆ.

ಈ ಕುರಿತು ಮಾಧ್ಯಮಗಳ ಜೊತೆ ಮಾತನಾಡಿದ ವಿದೇಶಾಂಗ ಸಚಿವಾಲಯ ವಕ್ತಾರ ರಣ್‌ಧೀರ್‌ ಜೈಸ್ವಾಲ್‌, ಪ್ರಜ್ವಲ್‌ ರೇವಣ್ಣ ಅವರು ರಾಜತಾಂತ್ರಿಕ ಪಾಸ್‌ಪೋರ್ಟ್‌ನಲ್ಲಿ ಪ್ರಯಾಣಿಸಿದ್ದಾರೆ. ರಾಜತಾಂತ್ರಿಕ ಪಾಸ್‌ಪೋರ್ಟ್‌ ಹಿಂಪಡೆಯಲು ಕೋರ್ಟ್‌ನಿಂದ ಆದೇಶ ಪ್ರಕಟವಾಗಬೇಕು. ಇಲ್ಲಿಯವರೆಗೆ ಕೋರ್ಟ್‌ ಆದೇಶ ಬಂದಿಲ್ಲ ಎಂದು ತಿಳಿಸಿದ್ದಾರೆ.

ಪ್ರಜ್ವಲ್‌ ರೇವಣ್ಣ ರಾಜತಾಂತ್ರಿಕ ಪಾಸ್‌ಪೋರ್ಟ್‌ ಬಳಸಿ ಜರ್ಮನಿಗೆ (Germany) ತೆರಳಿದ್ದಾರೆ. ಹೀಗಾಗಿ ಕೂಡಲೇ ಈ ಪಾಸ್‌ಪೋರ್ಟ್‌ ಹಿಂಪಡೆಯಬೇಕೆಂಬ ಆಗ್ರಹ ಕೇಳಿ ಬಂದಿದೆ.

ರಾಜತಾಂತ್ರಿಕ ಪಾಸ್‌ಪೋರ್ಟ್ ಎಂದರೇನು?
ಭಾರತದಲ್ಲಿ (India) ರಾಜತಾಂತ್ರಿಕ ಪಾಸ್‌ಪೋರ್ಟ್ ಅನ್ನು ರಾಜತಾಂತ್ರಿಕ ಶೀರ್ಷಿಕೆಯನ್ನು ಹೊಂದಿರುವ ಮತ್ತು ತಮ್ಮ ಅಧಿಕೃತ ಕರ್ತವ್ಯಗಳನ್ನು ಪೂರೈಸಲು ಇತರ ದೇಶಗಳಿಗೆ ಭೇಟಿ ನೀಡುವ ನಿರ್ದಿಷ್ಟ ವ್ಯಕ್ತಿಗಳಿಗೆ ಮಾತ್ರ ನೀಡಲಾಗುತ್ತದೆ. ಸಾಮಾನ್ಯ ಪಾಸ್‌ಪೋರ್ಟ್‌ಗಳಿಗಿಂತ ವಿಭಿನ್ನವಾಗಿ ಕಾಣುವ ಟೈಪ್ ಡಿ ಪಾಸ್‌ಪೋರ್ಟ್‌ ಇದಾಗಿದೆ. ರಾಜತಾಂತ್ರಿಕ ಪಾಸ್‌ಪೋರ್ಟ್‌ನ ಕವರ್ ಸಾಮಾನ್ಯ ಕಡು ನೀಲಿ ಬಣ್ಣಕ್ಕೆ ಬದಲಾಗಿ ಮರೂನ್ ಕವರ್ ಹೊಂದಿರುತ್ತದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!