ಹೊಸ ಪಡಿತರ ಚೀಟಿಗೆ ಅರ್ಜಿ ಸಲ್ಲಿಸಲು ಅನುಮತಿ ಇಲ್ಲ: ಸಚಿವ ಕೆ.ಹೆಚ್​.ಮುನಿಯಪ್ಪ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಪಡಿತರ ಚೀಟಿಗಾಗಿ ಅರ್ಜಿ ಸಲ್ಲಿಸಲು ಮುಂದಾವರಿಗೆ ಸರ್ಕಾರ ನಿರಾಶೆ ಮೂಡಿಸಿದೆ. ಹೊಸ ಎಪಿಎಲ್ (APL)​, ಬಿಪಿಎಲ್ (BPL)​ ಕಾರ್ಡ್​​ಗೆ ಅರ್ಜಿ ಸಲ್ಲಿಸಲು ಇನ್ನೂ ಒಂದಿಷ್ಟು ದಿನ ಅನುಮತಿ ಇಲ್ಲ ಎಂದು ಆಹಾರ ಇಲಾಖೆ ಸಚಿವ ಕೆ.ಹೆಚ್​.ಮುನಿಯಪ್ಪ (KH Muniyappa) ಹೇಳಿದರು.

ಬೆಂಗಳೂರಲ್ಲಿ ಮಾತನಾಡಿದ ಅವರು , ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಮಾದರಿ ನೀತಿಸಂಹಿತೆ ಜಾರಿಯಾಗುತ್ತಿದ್ದಂತೆಯೇ, ಹೊಸ ಪಡಿತರ ಚೀಟಿ ಅರ್ಜಿ ಸಲ್ಲಿಸುವ ಆನ್‌ಲೈನ್‌ ಪೋರ್ಟಲ್ ಸ್ಥಗಿತಗೊಳಿಸಲಾಗಿತ್ತು. ಇದೀಗ ಹೊಸ ಸರ್ಕಾರ ರಚನೆಯಾಗಿ ಮೂರು ತಿಂಗಳು ಕಳೆದು ಈ ಪೋರ್ಟ್​​ಲ್​ ಅನ್ನು ಆರಂಭಮಾಡಲಿಲ್ಲ. ಸರ್ಕಾರ ಅನುಮತಿ ನೀಡಿದ ನಂತರವಷ್ಟೇ ಅನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಕೆಗೆ ಅವಕಾಶ ಸಿಗಲಿದೆ.

ಸರಕಾರದ ಗ್ಯಾರಂಟಿ’ಗಳ ಲಾಭವನ್ನು ಪಡೆದುಕೊಳ್ಳಲು ಪಡಿತರ ಚೀಟಿ ಅಗತ್ಯವಾಗಿದೆ. ಈ ಹಿನ್ನೆಲೆಯಲ್ಲಿ ಹೊಸ ಪಡಿತರ ಚೀಟಿ ಮಾಡಿಸಲು ಜನರು ಮುಗಿಬೀಳುತ್ತಿದ್ದಾರೆ. ಇದೀಗ ಅರ್ಜಿ ಸ್ವೀಕಾರ ಪ್ರಕ್ರಿಯೆಗೆ ಸರ್ಕಾರ ಅನುವು ಮಾಡಿಕೊಟ್ಟಿಲ್ಲ.ಹೀಗಾಗಿ ಜನರು ಸಂಕಷ್ಟ ಪಡುತ್ತಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!