ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಷ್ಟ್ರೀಯ ಹೆದ್ದಾರಿ 44ರ ಚಿಕ್ಕಬಳ್ಳಾಪುರದಲ್ಲಿ ಕಾರ್ಯಾಚರಣೆ ನಡೆಸಿದ ಆರ್ಟಿಒ ಅಧಿಕಾರಿಗಳು, ಪರ್ಮಿಟ್ ಇಲ್ಲದೆ, ತೆರಿಗೆ ಕಟ್ಟದೆ ರಾಜ್ಯದಲ್ಲಿ ಸಂಚರಿಸುತ್ತಿದ್ದ 10ಕ್ಕೂ ಹೆಚ್ಚು ಐಷಾರಾಮಿ ಖಾಸಗಿ ಬಸ್ಗಳನ್ನ ಸೀಜ್ ಮಾಡಿದ್ದಾರೆ.
ಹೈದರಾಬಾದ್ ಸೇರಿದಂತೆ ಬೇರೆ ಬೇರೆ ಸ್ಥಳಗಳಿಂದ ಬೆಂಗಳೂರಿಗೆ ಬರುತ್ತಿದ್ದ ಬಸ್ಗಳನ್ನು ವಶಕ್ಕೆ ಪಡೆಯಲಾಗಿದ್ದು, ಪ್ರಯಾಣಿಕರಿಗೆ ಬದಲಿ ವ್ಯವಸ್ಥೆ ಮಾಡಲಾಗಿದೆ.
ನಾಗಾಲ್ಯಾಂಡ್ ಅರುಣಾಚಲ ಪ್ರದೇಶ ಸೇರಿ ವಿವಿಧ ರಾಜ್ಯಗಳ ನೋಂದಣಿ ಇರುವ ಬಸ್ಗಳನ್ನು ಅಧಿಕಾರಿಗಳು ತಪಾಸಣೆ ಮಾಡಿದ್ದಾರೆ.

