ಹೊಸದಿಗಂತ ಡಿಜಿಟಲ್ ಡೆಸ್ಕ್:
ಮೇಕೆದಾಟು ಅಣೆಕಟ್ಟು ಯೋಜನೆಯಲ್ಲಿ ಕಾಂಗ್ರೆಸ್, ಬಿಜೆಪಿ, ಜೆಡಿಎಸ್ ಎಂದು ರಾಜಕೀಯ ಮಾಡಿಕೊಂಡು ಕೂರಬಾರದು. ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ರಚನಾತ್ಮಕವಾಗಿ ಕೆಲಸ ಮಾಡಲಿ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ.ಬಿ ಪಾಟೀಲ್ ಹೇಳಿದ್ದಾರೆ.
ಕರ್ನಾಟಕ ಚಿತ್ರಕಲಾ ಪರಿಷತ್‌ನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಮೇಕೆದಾಟು ಅಣೆಕಟ್ಟು ಯೋಜನೆ ಜಾರಿಗೆ ಬಂದರೆ ಸಂಕಷ್ಟದ ಸಮಯದಲ್ಲಿ ಕರ್ನಾಟಕ ಮತ್ತು ತಮಿಳುನಾಡು ಹೀಗೆ ಎರಡು ರಾಜ್ಯಗಳಿಗೂ ಅನುಕೂಲವಾಗಲಿದೆ. ಕುಮಾರಸ್ವಾಮಿಯವರು ಮೇಕೆದಾಟು ಯೋಜನೆ ತಮ್ಮ ಕುಟುಂಬದಿಂದ ಮಾತ್ರ ಸಾಧ್ಯ ಎಂದಿದ್ದಾರೆ. ಇದು ಸರಿಯಲ್ಲ. ಇಂತಹ ಧೋರಣೆಗಳನ್ನು ಎಲ್ಲರೂ ಬಿಟ್ಟರೆ ಜನರಿಗೆ ಒಳ್ಳೆಯದಾಗುತ್ತದೆ ತಿಳಿಸಿದ್ದಾರೆ.