Sunday, September 14, 2025

ರಾಜಕೀಯ ಬೇಡ, ಮೇಕೆದಾಟು ಯೋಜನೆಗೆ ಅನುಮತಿ ನೀಡಿ: ಸಿಎಂ ಸಿದ್ದರಾಮಯ್ಯ

ಹೊಸ ದಿಗಂತ ಡಿಜಿಟಲ್ ಡೆಸ್ಕ್:

ಮೇಕೆದಾಟು ಯೋಜನೆಗೆ ಅನುಮತಿ ನೀಡಿ ಎಂದು ಕೇಂದ್ರ ಸರ್ಕಾರಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮನವಿ ಮಾಡಿದ್ದಾರೆ.

ಮಳವಳ್ಳಿ ತಾಲ್ಲೂಕಿನ ಗಗನಚುಕ್ಕಿಯಲ್ಲಿ ಜಿಲ್ಲಾಡಳಿತ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಪ್ರವಾಸೋದ್ಯಮ ಇಲಾಖೆ ವತಿಯಿಂದ ಆಯೋಜಿಸಲಾಗಿದ್ದ ಗಗನಚುಕ್ಕಿ ಜಲಪಾತೋತ್ಸವ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ಮೇಕೆದಾಟು ವಿಚಾರವಾಗಿ ತಮಿಳುನಾಡು ಹಾಗೂ ಕೇಂದ್ರ ಸರ್ಕಾರ ರಾಜಕೀಯ ಮಾಡಬಾರದು. ಯೋಜನೆ ನಿರ್ಮಾಣವಾದರೆ ತಮಿಳುನಾಡು ಹಾಗೂ ಕರ್ನಾಟಕ ಎರಡು ರಾಜ್ಯಗಳಿಗೂ ಅನುಕೂಲವಾಗಲಿದೆ. ಮೇಕೆದಾಟು ಯೋಜನೆ ಜಾರಿಯಾದರೆ, 66 ಟಿಎಂಸಿ ನೀರನ್ನು ನಾವು ಶೇಖರಣೆ ಮಾಡಿಕೊಳ್ಳಬಹುದು. ಅಗತ್ಯ ಬಿದ್ದಾಗ ಈ ನೀರನ್ನು ನಾವು ಬಳಸಿಕೊಳ್ಳಬಹುದು ಎಂದು ತಿಳಿಸಿದ್ದಾರೆ.

ಒಪ್ಪಂದದ ಪ್ರಕಾರ ತಮಿಳುನಾಡಿಗೆ 177.25 ಟಿಎಂಸಿ ನೀರು ಕೊಡಬೇಕು. ಪ್ರಸಕ್ತ ಸಾಲಿನಲ್ಲಿ ಈವರೆಗೆ 98 ಟಿಎಂಸಿ ನೀರು ಹರಿಸಬೇಕಿತ್ತು. ಉತ್ತಮ ಮಳೆಯಾಗಿರುವುದರಿಂದ 221 ಟಿಎಂಸಿ ನೀರನ್ನು ಹರಿಸಿದ್ದೇವೆ. ಹೆಚ್ಚುವರಿಯಾಗಿ 122 ಟಿಎಂಸಿ ನೀರು ಹರಿಸಿದ್ದೇವೆ. ಹಾಗಾಗಿ, ನೀರಿನ ಸಮಸ್ಯೆ ಇಲ್ಲ ಎಂದು ಹೇಳಿದ್ದಾರೆ.

ಇದನ್ನೂ ಓದಿ