ಹೊಸದಿಗಂತ ಡಿಜಿಟಲ್ ಡೆಸ್ಕ್:
ಅಭಿಮಾನ್ ಸ್ಟುಡಿಯೋದಲ್ಲಿರೋ ವಿಷ್ಣು ಸ್ಮಾರಕಕ್ಕೆ ಪೂಜೆ ಸಲ್ಲಿಸದಂತೆ ನಟ ಬಾಲಣ್ಣ ಅವರ ಮಕ್ಕಳಿಂದ ತಡೆಯೊಡ್ಡಿದ ಹಿನ್ನೆಲೆ ಅಭಿಮಾನ್ ಸ್ಟುಡಿಯೋ ಮುಂದೆ ದಿ. ಡಾ.ವಿಷ್ಣುವರ್ಧನ್ ಅಭಿಮಾನಿಗಳು ಪ್ರತಿಭಟನೆಗೆ ಮುಂದಾಗಿದ್ದಾರೆ.
ದಿ. ಡಾ.ವಿಷ್ಣುವರ್ಧನ್ ಅವರ 74ನೇ ಜನ್ಮದಿನದ ಅಂಗವಾಗಿ ಸಾವಿರಾರು ಅಭಿಮಾನಿಗಳು ಬೆಂಗಳೂರಿನ ಅಭಿಮಾನ್ ಸ್ಟುಡಿಯೋ ಸ್ಮಾರಕಕ್ಕೆ ಪೂಜೆ ಸಲ್ಲಿಸಲು ಆಗಮಿಸಿದ್ದಾರೆ. ದೂರದೂರುಗಳಿಂದ ಬೆಳ್ಳಂಬೆಳಗ್ಗೆಯೇ ಬಂದು ಸಾಲುಗಟ್ಟಿ ನಿಂತಿದ್ದಾರೆ.
ಆದರೆ ವಿಷ್ಣು ಸ್ಮಾರಕಕ್ಕೆ ಪೂಜೆ ಸಲ್ಲಿಸದಂತೆ ನಟ ಬಾಲಣ್ಣ ಅವರ ಮಕ್ಕಳು ತಡೆಯೊಡ್ಡಿದ್ದಾರೆ. ಸ್ಟುಡಿಯೋ ಗೇಟ್ ಬೀಗ ಹಾಕಿ ಸ್ಮಾರಕ ಮೈಸೂರಿನಲ್ಲಿ ಆಗಿರುವುದರಿಂದ ಅಲ್ಲಿಗೇ ಹೋಗಿ ಪೂಜೆ ಮಾಡುವಂತೆ ಖಾರವಾಗಿ ಹೇಳಿದ್ದಾರೆ. ಇದರಿಂದ ಆಕ್ರೋಶಗೊಂಡ ಅಭಿಮಾನಿಗಳು ಸ್ಮಾರಕದ ಗೇಟ್ ಬಳಿ ಪ್ರತಿಭಟನೆಗೆ ನಿರ್ಧರಿಸಿದ್ದಾರೆ.