ಹೊಸದಿಗಂತ ಡಿಜಿಟಲ್ ಡೆಸ್ಕ್:
ಮುಡಾ ಪ್ರಕರಣದಿಂದ ರಾಜ್ಯಸರ್ಕಾರದ ಆಡಳಿತದ ಮೇಲೆ ಯಾವುದೇ ಪರಿಣಾಮ ಬೀರಿಲ್ಲ. ಎಲ್ಲಾ ಸಚಿವರೂ ಆಯಾ ಇಲಾಖೆಗಳ ಕಾರ್ಯಕಲಾಪಗಳನ್ನು ನಿರ್ವಹಣೆ ಮಾಡುತ್ತಿದ್ದಾರೆಂದು ಗೃಹ ಸಚಿವ ಪರಮೇಶ್ವರ್ ಹೇಳಿದ್ದಾರೆ.
ರಾಜ್ಯ ಸರ್ಕಾರವು ನಿಗದಿತ ವೇಳಾಪಟ್ಟಿಯಂತೆ ಕಾರ್ಯನಿರ್ವಹಿಸುತ್ತಿದ್ದು, ಅದಕ್ಕೆ ತಕ್ಕಂತೆ ಸಚಿವರು ತಮ್ಮ ಇಲಾಖೆಗಳಲ್ಲಿ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳುತ್ತಿದ್ದಾರೆ. ಅಧಿಕಾರಿಗಳಾಗಲಿ, ಸಚಿವರಾಗಲಿ ಸುಮ್ಮನೆ ಕುಳಿತಿಲ್ಲ, ಈ ಪ್ರಕರಣ ಆಡಳಿತದ ಮೇಲೆ ಯಾವುದೇ ಪರಿಣಾಮ ಬೀರುತ್ತಿಲ್ಲ ಎಂದು ಹೇಳಿದರು.
ಮುಖ್ಯ ಕಾರ್ಯದರ್ಶಿಯವರು ತಮ ಪಾಲಿನ ಜವಾಬ್ದಾರಿಯನ್ನ ನಿಭಾಯಿಸುತ್ತಿದ್ದಾರೆ. ಹೈಕೋರ್ಟ್‌ನಲ್ಲಿ ಪ್ರಕರಣದ ವಿಚಾರಣೆ ಇರುವುದರಿಂದ ಮುಖ್ಯಮಂತ್ರಿಯವರು ತಮ ಕಲಾಪಗಳನ್ನು ನಿಲ್ಲಿಸಿರಬಹುದು. ಉಳಿದಂತೆ ಎಲ್ಲಾ ಆಡಳಿತ ವ್ಯವಸ್ಥೆ ಮುಂದುವರೆದಿದೆ ಎಂದು ತಿಳಿಸಿದರು.