ಹೊಸ ಗೌಪ್ಯತಾ ನೀತಿಯನ್ನು ಒಪ್ಪದವರರಿಗೆ ತೊಂದರೆಯಿಲ್ಲ, 5 ಪತ್ರಿಕೆಗಳಲ್ಲಿ ಪ್ರಚಾರ ಮಾಡಿ: Whatsapp ಗೆ ಸುಪ್ರೀಂ ಸೂಚನೆ!

ಹೊಸದಿಗಂತ ಡಿಜಿಟಲ್ ಡೆಸ್ಕ್:

ವಾಟ್ಸಾಪ್ ತನ್ನ ಹೊಸ ಗೌಪ್ಯತಾ ನೀತಿಯನ್ನು (Privacy policy) ಒಪ್ಪಿಕೊಳ್ಳದ ಬಳಕೆದಾರರ ಕಾರ್ಯವನ್ನು ನಿರ್ಬಂಧಿಸುವುದಿಲ್ಲ ಎಂದು 2021ರಲ್ಲಿ ಕೇಂದ್ರ ಸರ್ಕಾರಕ್ಕೆ ಭರವಸೆ ನೀಡಿತ್ತು. ಈ ಮಾಹಿತಿಯನ್ನು ಪ್ರಚಾರಗೊಳಿಸಬೇಕು ಎಂದು ಸುಪ್ರೀಂ ಕೋರ್ಟ್ (Supreme Court) ನಿರ್ದೇಶಿಸಿದೆ.

ಜಸ್ಟೀಸ್ ಕೆ ಎಂ ಜೊಸೇಫ್ ನೇತೃತ್ವದ ಐವರು ನ್ಯಾಯಮೂರ್ತಿಗಳ ಸಾಂವಿಧಾನಿಕ ಪೀಠವು, ಸರ್ಕಾರಕ್ಕೆ ನೀಡಿದ ಭರವಸೆಯನ್ನು ಐದು ಪತ್ರಿಕೆಗಳಲ್ಲಿ ಪ್ರಚಾರ ನೀಡಬೇಕು ಎಂದು ಸೂಚಿಸಿದೆ.

ನಾವು ಪತ್ರದಲ್ಲಿ ಸರ್ಕಾರ ತೆಗೆದುಕೊಂಡ ನಿಲುವನ್ನು ದಾಖಲಿಸುತ್ತೇವೆ. ಮುಂದಿನ ವಿಚಾರಣೆಯ ದಿನಾಂಕದವರೆಗೆ ಪತ್ರದ ಷರತ್ತುಗಳಿಗೆ ಬದ್ಧರಾಗಿರುತ್ತೇವೆ ಎಂದು ವಾಟ್ಸಾಪ್‌ನ ಹಿರಿಯ ವಕೀಲರ ಸಲ್ಲಿಕೆಯನ್ನು ಕೋರ್ಟ್ ಅಂಗೀಕರಿಸಿದೆ ಎಂದು ಪೀಠ ಹೇಳಿದೆ.

ಹೊಸ ಗೌಪ್ಯತಾ ನೀತಿಯನ್ನು ಒಪ್ಪದ ಬಳಕೆದಾರರ ಕಾರ್ಯವನ್ನು ಮಿತಿಗೊಳಿಸುವುದಿಲ್ಲ ಎಂಬ ಭರವಸೆಯನ್ನು ವಾಟ್ಸಾಪ್, ಎರಡು ಸಂದರ್ಭಗಳಲ್ಲಿ ಐದು ರಾಷ್ಟ್ರ ಮಟ್ಟದ ಪತ್ರಿಕೆಗಳಲ್ಲಿ ಪ್ರಚಾರ ಮಾಡಬೇಕು ಎಂದು ಪೀಠ ಹೇಳಿತು.
ಮುಂದಿನ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಏಪ್ರಿಲ್ 11ಕ್ಕೆ ನಿಗದಿ ಪಡಿಸಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!