ಹೊಸದಿಗಂತ ಡಿಜಿಟಲ್ ಡೆಸ್ಕ್:
ಕೇಂದ್ರ ಸಚಿವ ಎಚ್ಡಿ ಕುಮಾರಸ್ವಾಮಿ, ಬಿಜೆಪಿ ನಾಯಕರಾದ ಮುರುಗೇಶ್ ನಿರಾಣಿ, ಶಶಿಕಲಾ ಜೊಲ್ಲೆ ಹಾಗೂ ಶಾಸಕ ಜನಾರ್ಧನ ರೆಡ್ಡಿ ಅವರ ವಿರುದ್ಧ ವಿಚಾರಣೆಗೆ ಸಂಬಂಧಿಸಿದಂತೆ ಯಾವುದೇ ಕಡತ ರಾಜ್ಯಪಾಲರ ಕಚೇರಿಯಲ್ಲಿ ಬಾಕಿ ಇಲ್ಲ ಎನ್ನಲಾಗಿದೆ.
ಬಿಜೆಪಿ, ಜೆಡಿಎಸ್ ನಾಯಕರ ಮೇಲಿನ ಪ್ರಕರಣಗಳ ಸಂಬಂಧ ಪ್ರಾಸಿಕ್ಯೂಷನ್ಗೆ ಅನುಮತಿ ನೀಡುವಂತೆ ಒತ್ತಾಯಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಆದಿಯಾಗಿ ಸಚಿವರು, ಕಾಂಗ್ರೆಸ್ ನಾಯಕರು ವಿಧಾನಸೌಧದ ಗಾಂಧಿ ಪ್ರತಿಮೆಯಿಂದ ರಾಜಭವನ ಚಲೋ ನಡೆಸಿದರು. ಇದರ ಬೆನ್ನಲ್ಲೇ ರಾಜಭವನವು, ಪ್ರಾಸಿಕ್ಯೂಷನ್ ಕಡತಗಳು ನಮ್ಮ ಕಚೇರಿಯಲ್ಲಿ ಬಾಕಿ ಇಲ್ಲ ಎಂದು ಹೇಳಿದೆ ಎನ್ನಲಾಗಿದೆ.