ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
…………………………………………..
ಹೊಸದಿಗಂತ ಆನ್ಲೈನ್ ಡೆಸ್ಕ್:
ಸಾರ್ವಜನಿಕರಿಗೆ ಕೊರೋನಾ ಲಸಿಕೆ ಹಾಕಿಸಿಕೊಳ್ಳಲು ಯಾವುದೇ ನಿಬಂಧನೆ ಹೇರದಂತೆ ರಾಜ್ಯ ಸರ್ಕಾರ ಅಧಿಕೃತ ಸೂಚನೆ ನೀಡಿದೆ.
ರಾಜ್ಯದ ಎಲ್ಲಾ ಜಿಲ್ಲೆಗಳ ಜಿಲ್ಲಾಧಿಕಾರಿಗಳು ಮತ್ತು ಜಿಲ್ಲಾ ವೈದ್ಯಾಧಿಕಾರಿಗಳಿಗೆ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ರವಿಕುಮಾರ್ ಈಕುರಿತು ಅಧಿಕೃತ ಸೂಚನೆ ನೀಡಿದ್ದು, ಲಸಿಕೆಯನ್ನು ಎಲ್ಲರಿಗೂ ವಿತರಿಸಬೇಕೆಂಬ ಉದ್ದೇಶದಿಂದ ಯಾವುದೇ ಯೋಜನೆಗೆ ಲಸಿಕಾ ಕಾರ್ಯಕ್ರಮ ಜೋಡಿಸಿದ್ದರೆ ಕೈಬಿಡಿ ಎಂದು ಅವರು ಸೂಚನೆಯಲ್ಲಿ ತಿಳಿಸಿದ್ದಾರೆ. ನೋ ವ್ಯಾಕ್ಸಿನ್, ನೋ ರೇಷನ್ ಎಂದು ಚಾಮರಾಜನಗರ ಜಿಲ್ಲಾಧಿಕಾರಿ ಆದೇಶಿಸಿ ನಂತರ ಆದೇಶ ಹಿಂತೆಗೆದುಕೊಂಡ ಹಿನ್ನೆಲೆಯಲ್ಲಿ ಸಿಎಸ್ ರವಿಕುಮಾರ್ ಈ ಸೂಚನೆ ನೀಡಿದ್ದಾರೆ.