ಹೊಸ ದಿಗಂತ ಡಿಜಿಟಲ್ ಡೆಸ್ಕ್:
ದೆಹಲಿ ಸರ್ಕಾರವು ವಾಹನಗಳಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ(ಪಿಯುಸಿ) ಇಲ್ಲದೆ, ಇಂಧನ ಇಲ್ಲ ನೀತಿಯನ್ನು ಮುಂದುವರಿಸಲಿದೆ ಎಂದು ದೆಹಲಿ ಪರಿಸರ ಸಚಿವ ಮಂಜಿಂದರ್ ಸಿಂಗ್ ಸಿರ್ಸಾ ಅವರು ಮಂಗಳವಾರ ತಿಳಿಸಿದ್ದಾರೆ.
ಇಂದು ನಗರದಲ್ಲಿ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಸಿರ್ಸಾ, GRAP-IV ಸಡಿಲಿಕೆಯ ನಂತರವೂ ವಾಯು ಮಾಲಿನ್ಯ ವಿರೋಧಿ ಕ್ರಮಗಳನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸುವುದು ಮುಂದುವರಿಯುತ್ತದೆ ಮತ್ತು ಮಾಲಿನ್ಯ ನಿಯಂತ್ರಣ(ಪಿಯುಸಿ) ಪ್ರಮಾಣಪತ್ರವಿಲ್ಲದೆ ಯಾವುದೇ ವಾಹನಕ್ಕೆ ನಗರದಲ್ಲಿ ಸಂಚರಿಸಲು ಅನುಮತಿಸಲಾಗುವುದಿಲ್ಲ ಎಂದರು.
ಹಲವಾರು ಪಿಯುಸಿ ಕೇಂದ್ರಗಳು ಕಾರ್ಯನಿರ್ವಹಿಸುತ್ತಿಲ್ಲ ಮತ್ತು 12 ಕೇಂದ್ರಗಳು ದೋಷಯುಕ್ತ ಉಪಕರಣಗಳನ್ನು ಹೊಂದಿರುವುದು ಕಂಡುಬಂದಿದೆ ಎಂದು ತಪಾಸಣೆ ವೇಳೆ ಬಹಿರಂಗವಾಗಿದೆ. ಈ ಕೇಂದ್ರಗಳನ್ನು ಸ್ಥಗಿತಗೊಳಿಸಲಾಗಿದೆ ಮತ್ತು ನೋಟಿಸ್ ನೀಡಲಾಗಿದೆ. ಯಾರಾದರೂ ನಿಯಮಗಳನ್ನು ಉಲ್ಲಂಘಿಸುತ್ತಿರುವುದು ಕಂಡುಬಂದರೆ, ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಸಿರ್ಸಾ ಎಚ್ಚರಿಸಿದ್ದಾರೆ.

