ಹೊಸದಿಗಂತ ಬಳ್ಳಾರಿ:
ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ ನಡೆದ ಅಕ್ರಮಕ್ಕೆ ಸಂಬಂಧಿಸಿದಂತೆ ರಾಜ್ಯಪಾಲರು ತನಿಖೆಗೆ ಅನುಮತಿ ನೀಡಿದ್ದು, ಇದೊಂದು ರಾಜಕೀಯ ಪ್ರೇರಿತವಾಗಿದೆ, ಸಿಎಂ ಸಿದ್ದರಾಮಯ್ಯ ಅವರು ಯಾವುದೇ ಕಾರಣಕ್ಕೂ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡುವ ಪ್ರಶ್ನೆಯೇ ಇಲ್ಲ, ಎಲ್ಲವನ್ನೂ ಕಾನೂನು ಮೂಲಕ ಹೋರಾಟ ನಡೆಸುತ್ತೇವೆ, ನಮಗೆ ನ್ಯಾಯ ಸಿಗುವ ವಿಶ್ವಾಸವಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಜಮೀರ್ ಅಹ್ಮದ್ ಖಾನ್ ಅವರು ಹೇಳಿದರು.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮೂಡಾ ಪ್ರಕರಣದಲ್ಲಿ ಸಿ.ಎಂ.ಸಿದ್ದರಾಮಯ್ಯ ಅವರ ಹಸ್ತಕ್ಷೇಪ ಇಲ್ಲದಿದ್ದರೂ ರಾಜಕೀಯಕ್ಕಾಗಿ ವಿನಾಕಾರಣ ಸಿದ್ದರಾಮಯ್ಯ ಅವರನ್ನು ಸಿಲುಕಿಸಲು ಮುಂದಾಗಿದ್ದಾರೆ, ಬಿಜೆಪಿ ಹಾಗೂ ಜೆಡಿಎಸ್ ನವರ ಅಧಿಕಾರ ದುರ್ಬಳಕೆ ಮಾಡಿಕೊಂಡು, ರಾಜ್ಯಪಾಲರ ಮೂಲಕ ಸಿದ್ದರಾಮಯ್ಯ ಅವರ ವಿರುದ್ಧ ತನಿಖೆ ನಡೆಸಲು ಅನುಮತಿ ಕೊಡಿಸಿದ್ದಾರೆ, ಇದೊಂದು ರಾಜಕೀಯ ಷಡ್ಯಂತ್ರ, ರಾಜ್ಯಪಾಲರ ಮೇಲೆ ಒತ್ತಡ ಹೇರಿ ಅನುಮತಿ ಕೊಡಿಸಿದ್ದಾರೆ, ಈ ಪ್ರಕರಣವನ್ನು ಕಾನೂನು ಮೂಲಕ ಎದುರಿಸುತ್ತೇವೆ, ನಮಗೆ ನ್ಯಾಯ ಸಿಗಲಿದೆ ಎನ್ನುವ ವಿಶ್ವಾಸವಿದೆ ಎಂದರು.