September 27, 2026
Sunday, September 27, 2026
spot_img

ನಾಯಕತ್ವ ಬದಲಾವಣೆ ಪ್ರಶ್ನೆ ಇಲ್ಲ, ಹೈಕಮಾಂಡ್‌ ಈ ವಿಷಯ ಮಾತಾಡೇ ಇಲ್ಲ: ಶಾಸಕ ಪ್ರಸಾದ ಅಬ್ಬಯ್ಯ

ಹೊಸದಿಗಂತ ವರದಿ ಹುಬ್ಬಳ್ಳಿ:

ನಾಯಕತ್ವ ಬದಲಾವಣೆ ಬಗ್ಗೆ ಪ್ರಶ್ನೆ ಬಂದಿಲ್ಲ. ಹೈಕಮಾಂಡ್ ಈ ಬಗ್ಗೆ ಚರ್ಚೆ ನಡೆಸಿಲ್ಲ. ರಾಜ್ಯದ ರಾಜಕೀಯ ಬೆಳವಣಿಗೆ ಬಗ್ಗೆ ಚರ್ಚಿಸಲು ಸಿಎಂ ಹಾಗೂ ಡಿಸಿಎಂ ಅವರನ್ನು ಹೈಕಮಾಂಡ್ ಕರೆದಿದ್ದಾರೆ ಎಂದು ಶಾಸಕ ಪ್ರಸಾದ ಅಬ್ಬಯ್ಯ ತಿಳಿಸಿದರು.

ನಗರದಲ್ಲಿ ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿಎಂ ಹಾಗೂ ಡಿಸಿಎಂ ಕರೆದಿರುವುದರ ಕುರಿತು ಸ್ಪಷ್ಟತೆ ಇಲ್ಲ. ರಾಜ್ಯ ಸಭಾ ಹಾಗೂ ವಿಧಾನ ಪರಿಷತ್ ಸದಸ್ಯರ ಆಯ್ಕೆ ಸೇರಿದಂತೆ ವಿವಿದ ವಿಷಯ ಕುರಿತು ಚರ್ಚಿಸಬಹುದು ಎಂದರು.

ಸಚಿವ ಸಂಪುಟ ವಿಸ್ತರಣೆ ಮಾಡುತ್ತಾರೆ. ಸದ್ಯ ಯಾಕೆ ಕರೆದಿದ್ದಾರೆ ಎಂಬುವುದು ಗೊತ್ತಿಲ್ಲ. ಸಿಎಂ ಹಾಗೂ ಡಿಸಿಎಂ ಹೋದಾಗ ಸಚಿವರು ಹಾಗೂ ಪಕ್ಷದ ನಾಯಕರು ಹೋಗುವುದು ಸಾಮಾನ್ಯ. ಅದಕ್ಕೆ ವಿಶೇಷ ಅರ್ಥ ಕಲ್ಪಿಸುವುದು ಬೇಡ. ನಾನು ಸಚಿವ ಸ್ಥಾನ ಪ್ರಬಲ ಆಕಾಂಕ್ಷಿಯಾಗಿದ್ದು, ಹೈಕಮಾಂಡ್ ಅವರ ತೀರ್ಮಾನಕ್ಕೆ ಬದ್ಧನಾಗಿದ್ದೇನೆ. ಪಶ್ಚಿಮ ಬಂಗಾಲ ಹಾಗೂ ರಾಜ್ಯ ಎರಡು ಕಡೆ ಉಪಚುನಾವಣೆ ಬಂದ ಹಿನ್ನೆಲೆ ಸಚಿವ ಸಂಪುಟ ವಿಸ್ತರಣೆ ವಿಳಂಬವಾಗಿದೆ ಎಂದು ಹೇಳಿದರು.

ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್ ಅವರು ಅನಾರೋಗ್ಯದಿಂದ ಸಮುದಾಯ ಭವನ ಉದ್ಘಾಟನೆಗೆ ಬರಲು ಸಾಧ್ಯವಾಗಿಲ್ಲ. ಈ ಸಮುದಾಯ ಭವನ ಬಹಳ ವರ್ಷದ ಕನಸಾಗಿದೆ. ಬಿಜೆಪಿ ಸರ್ಕಾರ ಅವರ ಅವಽಯಲ್ಲಿ ಒಂದು ರೂಪಾಯಿ ಬಂದಿಲ್ಲ. ನಮ್ಮ ಸರ್ಕಾರ ೮.೫ ಕೋಟಿ ಅನುದಾನ ನೀಡಿದ್ದು, ಕಾಮಗಾರಿ ಸಂಪೂರ್ಣವಾಗಿದೆ ಎಂದು ತಿಳಿಸಿದರು.

Must Read