ಹೊಸದಿಗಂತ ಡಿಜಿಟಲ್ ಡೆಸ್ಕ್:
ಹಾವೇರಿ ಹಾನಗಲ್ ಗ್ಯಾಂಗ್ ರೇಪ್ ಪ್ರಕರಣದ ಸಂತ್ರಸ್ತೆ ಕುಟುಂಬದವರನ್ನು ಸಿಎಂ ಸಿದ್ದರಾಮಯ್ಯ ಭೇಟಿಯಾಗಿ, ಧೈರ್ಯ ತುಂಬಿದರು.
ಸಂತ್ರಸ್ತೆಯ ಕುಟುಂಬ ಸದಸ್ಯರು ಭೇಟಿಯಾಗಿ ಅಪರಾಧಿಗಳಿಗೆ ಕಠಿಣ ಶಿಕ್ಷೆ ನೀಡುವಂತೆ ಹಾಗೂ ಸಂತ್ರಸ್ತೆಗೆ ನ್ಯಾಯ ಕೊಡಿಸುವಂತೆ ಮನವಿ ಮಾಡಿದರು.
ಪ್ರಕರಣದ ತನಿಖೆ ಚುರುಕುಗೊಂಡಿದೆ. ಈವರೆಗೆ 7 ಆರೋಪಿಗಳನ್ನು ಬಂಧಿಸಲಾಗಿದೆ. ನೈತಿಕ ಪೊಲೀಸ್ ಗಿರಿ ಹೆಸರಲ್ಲಿ ತಮ್ಮದೇ ಸಮುದಾಯದ ಹೆಣ್ಣುಮಗಳ ಮೇಲೆ ಗ್ಯಾಂಗ್ ರೇಪ್ ನಡೆಸಿದ್ದಾರೆ. ಯಾವುದೇ ಧರ್ಮದವರಾಗಿರಲಿ ಕಾನೂನು ಕೈಗೆತ್ತಿಕೊಳ್ಳಲು ಬಿಡಲ್ಲ. ಅಪರಾಧಿಗಳಿಗೆ ಕಠಿಣೆ ಶಿಕ್ಷೆ ಕೊಡಿಸಲಾಗುವುದು ಎಂದರು.
ಪ್ರಕರಣದಲ್ಲಿ ಯಾರನ್ನೂ ರಕ್ಷಿಸುವ ಪ್ರಶ್ನೆಯೇ ಇಲ್ಲ. ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.