ಹೊಸದಿಗಂತ ಡಿಜಿಟಲ್ ಡೆಸ್ಕ್:
ಭಾರತೀಯ ಸೇನೆಯಲ್ಲಿ ನೇಮಕಾತಿಗಾಗಿ ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳ ನಡುವಿನ ದೈಹಿಕ ಪರೀಕ್ಷಾ ನಿಯತಾಂಕಗಳನ್ನು ಕಡಿಮೆ ಮಾಡಲು ಸರ್ಕಾರ ಪ್ರಸ್ತಾಪಿಸುತ್ತಿದೆಯೇ ಎಂದು ಡಿಎಂಕೆ ಸಂಸದ ಕಲಾನಿಧಿ ವೀರಸ್ವಾಮಿ ಸಂಸತ್ತಿನಲ್ಲಿ ಪ್ರಶ್ನಿಸಿದ್ದರು.
ಇದಕ್ಕುತ್ತರಿಸಿದ ಕೇಂದ್ರ ರಕ್ಷಣಾ ಖಾತೆ ರಾಜ್ಯ ಸಚಿವ ಸಂಜಯ್ ಸೇಠ್, ಮಹಿಳಾ ಅಭ್ಯರ್ಥಿಗಳ ದೈಹಿಕ ಪರೀಕ್ಷಾ ನಿಯಮಗಳ ಸಡಿಲಿಕೆ ಮಾಡುವ ಯಾವುದೇ ಪ್ರಸ್ತಾಪವನ್ನು ರಕ್ಷಣಾ ಸಚಿವಾಲಯ ಮುಂದಿಟ್ಟಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
ಇಲ್ಲಿಯವರೆಗೆ ಭಾರತೀಯ ಸೇನೆಯು ಅಂತಹ ಯಾವುದೇ ಪ್ರಸ್ತಾಪವನ್ನು ಮಂಡಿಸಿಲ್ಲ ಎಂದು ಅವರು ಹೇಳಿದ್ದಾರೆ.