ಹೊಸದಿಗಂತ ಡಿಜಿಟಲ್ ಡೆಸ್ಕ್:
ರೇಣುಕಾಸ್ವಾಮಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ದರ್ಶನ್ ಮತ್ತವರ ತಂಡದ ಕಸ್ಟಡಿ ಅವಧಿಯನ್ನು ಸೆ.9ರವರೆಗೆ ವಿಸ್ತರಿಸಿ 24ನೇ ಎಸಿಎಂಎಂ ನ್ಯಾಯಾಲಯ ಆದೇಶ ಹೊರಡಿಸಿದೆ.
ನ್ಯಾಯಾಂಗ ಬಂಧನ ಅಂತ್ಯವಾಗಿದ್ದ ಹಿನ್ನೆಲೆಯಲ್ಲಿ, ಆರೋಪಿಗಳನ್ನು ಇಂದು ನ್ಯಾಯಾಧೀಶರ ಮುಂದೆ ವೀಡಿಯೊ ಕಾನ್ಫರೆನ್ಸ್ ಮೂಲಕ ಹಾಜರಾದರು.
ಆರೋಪಿಗಳನ್ನು ಪುನಃ ನ್ಯಾಯಾಂಗ ಬಂಧನಕ್ಕೆ ನೀಡುವಂತೆ ಪೊಲೀಸರು ಮನವಿ ಮಾಡಿಕೊಂಡರು. ಮನವಿ ಪುರಸ್ಕರಿಸಿದ ನ್ಯಾಯಾಧೀಶರು ದರ್ಶನ್ ಮತ್ತು ಗ್ಯಾಂಗ್‌ನ ನ್ಯಾಯಾಂಗ ಬಂಧನ ಅವಧಿ ವಿಸ್ತರಿಸಿ ಮತ್ತೆ ಆದೇಶ ಹೊರಡಿಸಿದ್ದಾರೆ.