ಹೊಸದಿಗಂತ ಡಿಜಿಟಲ್ ಡೆಸ್ಕ್:
ಅಬಕಾರಿ ನೀತಿ ಪ್ರಕರಣದಲ್ಲಿ ಸಿಬಿಐ ತನ್ನನ್ನು ಬಂಧಿಸಿರುವುದನ್ನ ಪ್ರಶ್ನಿಸಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಸಲ್ಲಿಸಿದ್ದ ಅರ್ಜಿಯ ತೀರ್ಪನ್ನು ದೆಹಲಿ ಹೈಕೋರ್ಟ್ ಬುಧವಾರ ಕಾಯ್ದಿರಿಸಿದೆ.
ಮಧ್ಯಂತರ ಜಾಮೀನು ಕೋರಿ ಕೇಜ್ರಿವಾಲ್ ಸಲ್ಲಿಸಿದ್ದ ಅರ್ಜಿಯ ಮೇಲಿನ ಆದೇಶವನ್ನು ಹೈಕೋರ್ಟ್ ಕಾಯ್ದಿರಿಸಿದೆ. ನಿಯಮಿತ ಜಾಮೀನು ಅರ್ಜಿಯ ವಿಚಾರಣೆಯನ್ನು ನ್ಯಾಯಾಲಯವು ಜುಲೈ 29ಕ್ಕೆ ನಿಗದಿಪಡಿಸಿದೆ.