ಮುನಿರತ್ನಗೆ ಸದ್ಯಕ್ಕಂತೂ ನೋ ರಿಲೀಫ್.. ಮತ್ತೆ 14 ದಿನ ಸೆರೆಮನೆ ವಾಸ ಫಿಕ್ಸ್

ಹೊಸದಿಗಂತ ಡಿಜಿಟಲ್ ಡೆಸ್ಕ್:

ಅತ್ಯಾಚಾರ ಪ್ರಕರಣದಲ್ಲಿ ಕಗ್ಗಲಿಪುರ ಪೊಲೀಸರಿಂದ ಬಂಧನಕ್ಕೊಳಗಾಗಿದ್ದ ಶಾಸಕ ಮುನಿರತ್ನ ಅವರನ್ನು 14 ದಿನಗಳ ಕಸ್ಟಡಿಗೆ ವಿಧಿಸಿ ನ್ಯಾಯಾಲಯ ಆದೇಶಿಸಿದೆ.

ಗುತ್ತಿಗೆದಾರನಿಗೆ ಬೆದರಿಕೆ ಹಾಕಿದ ಮತ್ತು ಜಾತಿ ನಿಂದನೆ ಪ್ರಕರಣದಲ್ಲಿ ನ್ಯಾಯಾಂಗ ಬಂಧನಕ್ಕೊಳಗಾಗಿ ಜೈಲು ಪಾಲಾಗಿದ್ದ ಅವರು ಗುರುವಾರವಷ್ಟೇ ಜಾಮೀನಿನ ಮೇಲೆ ಬಿಡುಗಡೆಯಾಗಿದ್ದರು. ಇದರ ಬೆನ್ನಲ್ಲೇ ಅತ್ಯಾಚಾರ ಪ್ರಕರಣದಲ್ಲಿ ಮತ್ತೆ ಅರೆಸ್ಟ್ ಆಗಿದ್ದಾರೆ.

ಪೊಲೀಸರು ಇಂದು ಮುನಿರತ್ನ ಅವರನ್ನು ನ್ಯಾಯಾಲಯದ ಮುಂದೆ ಹಾಜರುಪಡಿಸಿದ್ದು, ನ್ಯಾಯಾಲಯ ಅಕ್ಟೋಬರ್ 5ರವರೆಗೆ ಕಸ್ಟಡಿಗೆ ನೀಡಿ ಆದೇಶಿಸಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here