ಹೊಸದಿಗಂತ ಡಿಜಿಟಲ್ ಡೆಸ್ಕ್:
ಮಾಜಿ ಸಿಎಂ ಹಾಗೂ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಗಂಭೀರ ಆರೋಪ ಮಾಡಿದ್ದಾರೆ. ವಿಕಲಚೇತನ ದಲಿತರಿಗೆ ಮೀಸಲಾದ ನಿವೇಶನದಲ್ಲಿ ಸಿದ್ದರಾಮಯ್ಯ ಮನೆ ಕಟ್ಟಿದ್ದಾರೆ ಎಂದು ಆರೋಪಿಸಿದ್ದಾರೆ.
ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಸಿಎಂ ಸಿದ್ದರಾಮಯ್ಯ ವಿರುದ್ಧದ ಮುಡಾ ಹಗರಣ ಪ್ರಕರಣ ಅಂತಿಮ ಹಂತ ತಲುಪಿರುವಂತೆಯೇ ಮತ್ತೊಂದು ಗಂಭೀರ ಆರೋಪ ಮಾಡಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಕುಮಾರಸ್ವಾಮಿ, ಸಿದ್ದರಾಮಯ್ಯ ಅವರು ಡಿಸಿಎಂ ಆಗಿದ್ದಾಗ ಮನೆ ಕಟ್ಟಿದ್ದಾರೆ. ಯಾರ ಆಸ್ತಿಯಲ್ಲಿ ಮನೆ ಕಟ್ಟಿದ್ದೀರಿ? ನಿಮಗೆ ಆ ದಾಖಲೆ ಬೇಕಾ? ದಲಿತ ಸಿಎ ಸೈಟ್ ಮುಡಾದಲ್ಲಿ ಅಲಾಟ್ ಆಗಿದ್ದ ಸೈಟ್ ನಲ್ಲಿ ಅಕ್ರಮವಾಗಿ ಮನೆ ಕಟ್ಟಿದ್ದಾರೆ ಎಂದು ಹೇಳಿದ್ದಾರೆ.
ದಲಿತ ವಿಕಲಚೇತನ ವ್ಯಕ್ತಿ 24 ಸಾವಿರ ರೂಪಾಯಿ ನೀಡಿ ಸೈಟ್ ಪಡೆಯುತ್ತಾನೆ. ಸಾಕಮ್ಮ ಎಂಬುವವರ ಹೆಸರಿನಲ್ಲಿ ಸುಳ್ಳು ದಾಖಲೆಗಳನ್ನು ಸೃಷ್ಟಿ ಮಾಡಿ 10 ಸಾವಿರ ರೂ.ಸೈಯರ್ ಫೀಟ್ ಜಾಗ ಅಕ್ರಮವಾಗಿ ಪಡೆಯುತ್ತಾರೆ. ಆಮೇಲೆ ಸೈಟ್ ತಗೊಂಡವರು ಯಾರೋ ಮನೆ ಕಟ್ಟಿದ್ದಾರೆ ಎಂದು ನೋಡುವುದಕ್ಕೆ ಬರ್ತಾರೆ. ಈ ಬಗ್ಗೆ ನನ್ನ ಬಳಿ ಈಗಲೂ ದಾಖಲೆಗಳಿವೆ ಎಂದಿದ್ದಾರೆ.