ಹೊಸದಿಗಂತ ಡಿಜಿಟಲ್ ಡೆಸ್ಕ್:
ಕಾವೇರಿ ನೀರಿನ ವಿಚಾರವಾಗಿ ಪ್ರಧಾನಮಂತ್ರಿಗಳ ಕಚೇರಿಗೆ ಸರ್ವಪಕ್ಷ ನಿಯೋಗ ಕರೆದುಕೊಂಡು ಹೋಗಲು ಪತ್ರ ಬರೆಯುತ್ತಲೇ ಇದ್ದೇವೆ, ಆದ್ರೆ ಅಲ್ಲಿಂದ ಯಾವುದೇ ಪ್ರತಿಕ್ರಿಯೆ ಬಂದಿಲ್ಲ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು.
ಪ್ರಧಾನಮಂತ್ರಿ ಭೇಟಿಗೆ ಮುಂದಿನ ವಾರ ಅವಕಾಶ ಸಿಗಬಹುದೆಂದು ನಂಬಿದ್ದೇವೆ ಎಂದರು.
ನಮ್ಮ ಬಳಿ ಕೇವಲ ಕುಡಿಯಲು ಮತ್ತು ನಮ್ಮ ರೈತರ ಬೆಳೆಗಳಿಗೆ ಸಾಕಾಗುವಷ್ಟು ಮಾತ್ರ ನೀರಿದೆ. ಕಾವೇರಿ ಅಚ್ಚುಕಟ್ಟು ಪ್ರದೇಶದ ಅಣೆಕಟ್ಟುಗಳಲ್ಲಿ ನೀರಿಲ್ಲ ಎಂದು ಸ್ಪಷ್ಟವಾಗಿ ಕಾವೇರಿ ಪ್ರಾಧಿಕಾರಕ್ಕೆ ಮಾಹಿತಿ ನೀಡಿದ್ದೇವೆ ಎಂದು ಹೇಳಿದರು.